More

    ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲೋತ್ಸವ ವೇದಿಕೆ

    ಚನ್ನರಾಯಪಟ್ಟಣ: ಮಕ್ಕಳಲ್ಲಿ ಅಡಗಿರುವ ಕಲಾಜ್ಞಾನ ಹಾಗೂ ಪ್ರತಿಭೆಯನ್ನು ಗುರುತಿಸಿ ಹೊರತರಲು ಇಂತಹ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು.

    ಪಟ್ಟಣದ ಗೂರಮಾರನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಹಲವು ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಸಾಧನೆ ತೋರುತ್ತಿದ್ದು, ಶಿಕ್ಷಕರು ಪಠ್ಯದೊಂದಿಗೆ ಮಕ್ಕಳಿಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಬೋಧಿಸುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕು. ವಿದ್ಯಾರ್ಥಿಗಳು ತಮ್ಮ ಪಠ್ಯೇತರ ಚಟುವಟಿಕೆಗಳ ಜತೆಗೆ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಪಾಲಕರು ಮತ್ತು ಶಿಕ್ಷಕರು ಮಕ್ಕಳನ್ನು ಗಮನಿಸಿ ಅವರಿಗೆ ಯಾವುದರಲ್ಲಿ ಆಸಕ್ತಿ ಹೆಚ್ಚಾಗಿದೆಯೋ ಆ ನಿಟ್ಟಿನಲ್ಲಿ ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡಲು ಸಾಧ್ಯವಾಗುತ್ತದೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್.ದೀಪಾ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಭಾಷಣ, ಚಿತ್ರಕಲೆ, ಧಾರ್ಮಿಕ ಪಠಣ, ರಸಪ್ರಶ್ನೆ ಸೇರಿದಂತೆ ನೃತ್ಯ, ಹಾಡುಗಾರಿಕೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಮಕ್ಕಳು ಸ್ಪರ್ಧಿಸಿ ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೂ ಭಾಗವಹಿಸುವ ಅವಕಾಶವಿದೆ ಎಂದರು.

    ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಅನಿಲ್ ಕುಮಾರ್, ದೇವರಾಜೇಗೌಡ, ಚಲುವನಾರಾಯಣಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೇರಹಳ್ಳಿ ಮಂಜುನಾಥ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಟಿ.ಮಂಜಪ್ಪ, ಕೆ.ಟಿ.ನಾಗರಾಜು, ಮುಖಂಡರಾದ ಕಾಳೇಗೌಡ, ದ್ಯಾವೆಗೌಡ, ಮಹದೇವ್, ಮಂಜೇಶ್, ಚಿಕ್ಕೇಗೌಡ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts