More

    ಕಲ್ಪತರು ಮಾವು ಮೇಳಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ಚಾಲನೆ

    ತುಮಕೂರು: ಸಂಕಷ್ಟದಲ್ಲಿರುವ ಜಿಲ್ಲೆಯ ಮಾವು ಬೆಳೆಗಾರರಿಗೆ ಸ್ವಲ್ಪ ಮಟ್ಟಿಗೆ ನೆರವಾಗಲು ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಮಹಾನಗರ ಪಾಲಿಕೆ, ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ನಿಗಮ ಮುಂದಾಗಿದ್ದು, ಮಾವು ಮೇಳ ಆರಂಭಿಸಿವೆ.

    ತುಮಕೂರು ವಿವಿ ಆವರಣದಲ್ಲಿ ಮೇಳಕ್ಕೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಚಾಲನೆ ನೀಡಿದರು, ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ಜಿಲ್ಲೆಯ ಮಾವು ಬೆಳೆಗಾರರು ತಾವು ಬೆಳೆದ ಹಣ್ಣುಗಳನ್ನು ಮಾರಾಟ ಮಾಡದಿರುವುದನ್ನು ಗಮನಿಸಿ ತೋಟಗಾರಿಕೆ ಇಲಾಖೆ ಮೂಲಕ ‘ಕಲ್ಪತರು’ ಎಂಬ ಬ್ರ್ಯಾಂಡ್ ಅಡಿಯಲ್ಲಿ ಮಾರುಕಟ್ಟೆ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

    ಜಿಲ್ಲೆಯ ರೈತರು ನೇರವಾಗಿ ಗ್ರಾಹಕರ ಕೈಗೆಟಕುವ ದರದಲ್ಲಿ, ಸಣ್ಣ-ಸಣ್ಣ ಮಾರುಕಟ್ಟೆಗಳ ಮೂಲಕ ಮಾರಾಟ ಮಾಡಿ ಲಾಭ ಗಳಿಸಬಹುದು ಹಾಗೂ ಗ್ರಾಹಕರೂ ಸಹ ಮಾವಿನ ಹಣ್ಣು ಖರೀದಿಸಿ ಸವಿಯಬಹುದು ಎಂದರು. ರಾಸಾಯನಿಕ ಬಳಸಿ ಮಾಗಿಸಿದ ಹಣ್ಣುಗಳು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ನೈಸರ್ಗಿಕ ಮತ್ತು ಸಾಂಪ್ರದಾಯಿಕವಾಗಿ ಮಾಗಿಸಿದ ಹಣ್ಣುಗಳಿಗೆ ಬೇಡಿಕೆಯಿದೆ ಎಂದರು.

    ಜಿಪಂ ಅಧ್ಯಕ್ಷೆ ಲತಾ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಫರೀದಾ ಬೇಗಂ, ಉಪ ಮೇಯರ್ ಶಶಿಕಲಾ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಜಿಪಂ ಸಿಇಒ ಶುಭಾಕಲ್ಯಾಣ್, ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts