ವಿಜಯವಾಣಿ ಸುದ್ದಿಜಾಲ ಧಾರವಾಡ
ಶ್ರೀ ವಾಯುಪುತ್ರ ಸಾಂಸ್ಕೃತಿಕ ಕಲಾ ಕ್ರೀಡಾ ಶಿಕ್ಷಣ ಹಾಗೂ ಗ್ರಾಮ ಅಭಿವೃದ್ಧಿ ಯುವ ಸಂಘ ಮತ್ತು ಜೇವರ್ಗಿಯ ವಿಶ್ವಜ್ಯೋತಿ ಶ್ರೀ ಪಂಚಾಕ್ಷರಿ ನಾಟ್ಯ ಸಂಘದ ಸಹಯೋಗದಲ್ಲಿ ಮಜಾಭಾರತ ಹಾಗೂ ಕಾಮಿಡಿ ಟಾಕೀಸ್ ಹಾಸ್ಯ ಕಲಾವಿದ ಬಸವರಾಜ ಗುಡ್ಡಪ್ಪನವರ ಸಹಾಯಾರ್ಥವಾಗಿ ಡಿ. 7ರಂದು ನಗರದ ಆಲೂರು ವೆಂಕಟರಾವ ಸಭಾಭವನದಲ್ಲಿ `ಕಲ್ಯಾಗ ತಕ್ಕ ಮಲ್ಲಿ’ (ಗಂಡಗ ತಕ್ಕ ಹೆಂಡತಿ) ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3ರಿಂದ 6 ಹಾಗೂ 6.30ರಿಂದ 9.30ರವರೆಗೆ 2 ಪ್ರದರ್ಶನ ಇರಲಿದೆ. ಹಾಸ್ಯ ಕಲಾವಿದ ಬಸವರಾಜ ಗುಡ್ಡಪ್ಪನವರ, ಮಜಾಭಾರತ, ಕಾಮಿಡಿ ಟಾಕೀಸ್, ಮಜಾ ಟಾಕೀಸ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ನೀಲಾ ಜೇವರ್ಗಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸುಜಾತಾ ಜೇವರ್ಗಿ ಮುಖ್ಯ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಟಕಕ್ಕೆ ಡಾ. ರಾಜು ತಾಳಿಕೋಟಿ, ಕಾಮಿಡಿ ಕಿಲಾಡಿ ವಿನ್ನರ್ ಹರೀಶ ಹಿರಿಯೂರ, ಗಿಚ್ಚಿ ಗಿಲಿಗಿಲಿ ಚಂದ್ರಪ್ರಭ ಹಾಗೂ ಚಿಲ್ಲರ್ ಮಂಜು ಸೇರಿ ವಿವಿಧ ಕಲಾವಿದರು ಸಾಥ್ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
`ಕಲ್ಯಾಗ ತಕ್ಕ ಮಲ್ಲಿ’ ನಾಟಕ ಪ್ರದರ್ಶನ 7ರಂದು
![blank](https://www.vijayavani.net/wp-content/plugins/wp-fastest-cache-premium/pro/images/blank.gif)
You Might Also Like
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…