ಭಾರತ ಜಗತ್ತಿನ ದೇವರ ಕೋಣೆ - ಸಾಧ್ವೀ ಮಾತಾನಂದಮಯಿ ಅಭಿಪ್ರಾಯ - ಆಮಂತ್ರಣ ಪತ್ರ ಬಿಡುಗಡೆ

PTR_7 SEP_1
Published on

ಪುತ್ತೂರು: ಆಧ್ಯಾತ್ಮಿಕ ಮೂಲಕ ಭಾರತ ಜಗತ್ತಿನ ದೇವರ ಕೋಣೆ. ಸಂಸ್ಕೃತಿ ಹಾಗೂ ಧರ್ಮ ರಕ್ಷಣೆಯ ಮೂಲ ಉದ್ದೇಶ ಇಟ್ಟು ಕೆಲಸ ಮಾಡಬೇಕು ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಸಾಧ್ವೀ ಮಾತಾನಂದಮಯಿ ಹೇಳಿದರು.

ಮುಕ್ರಂಪಾಡಿಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಸಾರಥ್ಯದಲ್ಲಿ ನ.೨೯, ೩೦ರಂದು ನಡೆಯುವ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದು ಸಾಮಾಜೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ನರಸಿಂಹ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಸಿದ್ದನಾಥ್ ಕಂದಾರೆ, ಕಾರ್ಯಾಧ್ಯಕ್ಷ ಪ್ರಾಣೇಶ್ ಕೆಮ್ಮಾಯಿ, ಕೋಶಾಧಿಕಾರಿ ಉದಯಕುಮಾರ್ ರೈ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪ್ರೇಮ್‌ರಾಜ್ ಆರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್ ಟಿ., ಉಮೇಶ್ ಕೋಡಿಬೈಲು, ವೆಂಕಟ್ರಮಣ ಕಡಬ, ಭೀಮ ಭಟ್, ಅನಿಲ್ ತೆಂಕಿಲ, ಮಹಿಳಾ ಘಟಕ ಅಧ್ಯಕ್ಷೆ ಪ್ರೇಮಾ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಪ್ರಸ್ತಾವನೆಗೈದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net