ಹೈದ್ರಾಬಾದ್: ಹಿರಿಯ ನಟ ಮತ್ತು ನಿರ್ದೇಶಕ, ಖ್ಯಾತ ನಟ ಕಮಲ್ ಹಾಸನ್ ಅವರ ಸಹೋದರ ಚಾರು ಹಾಸನ್ ( Charuhasan Hospitalised )ಅವರು ತೀವ್ರ ಅಸ್ವಸ್ಥರಾಗಿದ್ದಾರೆ.
ಚಾರು ಹಾಸನ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪುತ್ರಿ, ಖ್ಯಾತ ಚಿತ್ರನಟಿ ಸುಹಾಸಿನಿ ಮಣಿರತ್ನಂ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ.
ಖ್ಯಾತ ನಟ ಹಾಗೂ ನಿರ್ದೇಶಕ ಚಾರು ಹಾಸನ್ ಕೆಲ ದಿನಗಳಿಂದ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಮನೆಯ ತಾರಸಿ ಮೇಲೆ ಬಿದ್ದಿದ್ದಾರಂತೆ. ಚಾರು ಹಾಸನ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಷಯವನ್ನು ನಟಿ ಸುಹಾಸಿನಿ ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.
ಆಸ್ಪತ್ರೆಯ ಬೆಡ್‌ನಲ್ಲಿರುವ ತನ್ನ ತಂದೆಯ ಫೋಟೋಗಳು ಮತ್ತು ವೀಡಿಯೊಗಳನ್ನು ಅವರು ಹಂಚಿಕೊಂಡಿದ್ದಾರೆ. ಸುಹಾಸಿನಿ ವಿಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ. ‘ದೀಪಾವಳಿಯ ಹಿಂದಿನ ದಿನ ಅಪ್ಪ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹಬ್ಬದ ದಿನವನ್ನು ಅವರು ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಳೆದರು. ಈಗ ಅಪ್ಪನ ಸ್ಥಿತಿ ಚೆನ್ನಾಗಿದೆ. ಶಸ್ತ್ರಚಿಕಿತ್ಸೆಗೆ ಸಿದ್ಧರಾಗುತ್ತಿದ್ದೇವೆ ಎಂದು ಸುಹಾಸಿನಿ ಹೇಳಿದ್ದಾರೆ. ಇದೀಗ ಈ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನು ನೋಡಿದ ಸಿನಿ ಅಭಿಮಾನಿಗಳು ಮತ್ತು ನೆಟ್ಟಿಗರು ಚಾರು ಹಾಸನ್ ಶೀಘ್ರ ಗುಣಮುಖರಾಗಲಿ ಎಂದು ಕಾಮೆಂಟ್ಸ್ ಹಾಕುತ್ತಿದ್ದಾರೆ.
ಚಾರುಹಾಸನ್ ಅವರು ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕರಾಗಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ವರ್ಷ ಬಿಡುಗಡೆಯಾದ ತಮಿಳು ಚಿತ್ರ ‘ಹರ’ದಲ್ಲಿ ಚಾರು ಹಾಸನ್ ಕೊನೆಯದಾಗಿ ಕಾಣಿಸಿಕೊಂಡಿದ್ದರು.
3 ಕೋಟಿ ರೂ. ಮೌಲ್ಯದ ದ್ವೀಪವನ್ನೇ ಖರೀದಿಸಿದ ಹಾಟ್ ನಟಿ Jacqueline Fernandez