ಲೋಕಸಭೆ ಚುನಾವಣೆ; ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಕಮಲ್ ಹಾಸನ್​ ಆಸಕ್ತಿ

kamal Hassan
Published on

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ಬಹುಭಾಷಾ ನಟ, ಮಕ್ಕಳ್​ ನೀತಿ ಮೈಯಂ (MNM) ಪಕ್ಷದ ಮುಖ್ಯಸ್ಥ ಕಮಲ್​ ಹಾಸನ್​ ವ್ಯಕ್ತಪಡಿಸಿದ್ದಾರೆ. ಅವರ ಈ ಮಾತು ತಮ್ಮ ಪಕ್ಷವು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಶೀಲ ಮೈತ್ರಿಕೂಟಕ್ಕೆ (SPA) ಸೇರುತ್ತದೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡಿದೆ.

2021ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲುಂಡಿದ್ದರು.

ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಕಮಲ್​ ಹಾಸನ್​ ಜನರು ನನ್ನ ಚಿತ್ರಗಳನ್ನು ಬಂದು ವೀಕ್ಷಿಸುವ ಹಾಗೆ ನನಗೆ ಏಕೆ ಮತ ಹಾಕುವುದಿಲ್ಲ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲು ಸಿದ್ದತೆ ಆರಂಭಿಸಿದ್ದೇನೆ ಎಂದು ಹೇಳುವ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಮಕ್ಕಳ್​ ನೀತಿ ಮೈಯಂ (MNM) ಪಕ್ಷವು ತಮಿಳುನಾಡು ಸಿಎಂ ಸ್ಟಾಲಿನ್​ ನೇತೃತ್ವದ ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ತಮ್ಮ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ನಿಟ್ಟಿನಲ್ಲಿ ಕಮಲ್​ ಹಾಸನ್​ ಈ ಮೈತ್ರಿಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net