

ಚೆನ್ನೈ: ನಟ ಕಮಲ್ ಹಾಸನ್ ಅವರು, ಇತ್ತೀಚೆಗಷ್ಟೇ ಕೆಲಸ ಕಳೆದುಕೊಂಡಿದ್ದ ಮಹಿಳಾ ಬಸ್ ಡ್ರೈವರ್‌ಗೆ ಕಾರ್ ಗಿಫ್ಟ್ ನೀಡುವ ಮೂಲಕ ಸುದ್ದಿಯಾಗಿದ್ದರು. ಇದೀಗ ನಿರ್ದೇಶಕ ಶಂಕರ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟಿದ್ದಾರೆ.
ಖ್ಯಾತ ನಿರ್ದೇಶಕ ಶಂಕರ್‌ಗೆ ದುಬಾರಿ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ಸೂಪರ್ ಹಿಟ್ ಆಗಿದ್ದರೆ ನಿರ್ಮಾಪಕರು, ಹೀರೋಗಳು ನಿರ್ದೇಶಕರಿಗೆ ಒಂದಿಷ್ಟು ದುಬಾರಿ ಗಿಫ್ಟ್ ಕೊಡುತ್ತಾರೆ. ಅವರು ಹೆಚ್ಚಾಗಿ ಕಾರುಗಳು ಮತ್ತು ಕೈಗಡಿಯಾರಗಳನ್ನು ನೀಡುತ್ತಾರೆ. ಇತ್ತೀಚೆಗಷ್ಟೇ ಕಮಲ್ ಹಾಸನ್ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕ ಶಂಕರ್‌ಗೆ ದುಬಾರಿ ಗಿಫ್ಟ್ ಒಂದನ್ನು ನೀಡಿದ್ದರು.
ಕಮಲ್ ಹಾಸನ್ ಸದ್ಯ ಇಂಡಿಯನ್ -2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಶಂಕರ್ ಸಾರಥ್ಯದಲ್ಲಿ ಸಿನಿಮಾ ಮೂಡಿಬರುತ್ತಿದೆ.ಸದ್ಯ ಯಶಸ್ವಿಯಾಗಿ ಚಿತ್ರೀಕರಣ ಮುಗಿಯುತ್ತಿರುವ ಬೆನ್ನಲ್ಲೇ ಕಮಲ್ ಹಾಸನ್ ದುಬಾರಿ ವಾಚ್ ಉಡುಗೊರೆಯಾಗಿ ನೀಡಿದ್ದಾರೆ.
ಕಮಲ್ ಈ ಉಡುಗೊರೆ ಕೊಡಲು ಕಾರಣ: ಇಂಡಿಯನ್ -2 ಸಿನಿಮಾ. ಚಿತ್ರದ ಕೆಲವು ದೃಶ್ಯಗಳನ್ನು ಇಂಪ್ರೆಸ್ ಆದ ಕಮಲ್ ಈ ಗಿಫ್ಟ್ ನೀಡಿದ್ದಾರೆ ಎನ್ನಲಾಗಿದೆ.
ಶಂಕರ್ ಕೈಗೆ ಸ್ವತಃ ಕಮಲ್ ಹಾಸನ್ ವಾಚ್ ಕಟ್ಟುವ ಫೋಟೋವನ್ನು ಶೇರ್ ಮಾಡಿ ಬಹಿರಂಗ ಪಡಿಸಿದ್ದಾರೆ. 'ನಾನು ಇಂದು ಇಂಡಿಯನ್ 2 ಚಿತ್ರದ ಪ್ರಮುಖ ದೃಶ್ಯಗಳನ್ನು ನೋಡಿದೆ. ಶಂಕರ್‌ಗೆ ನನ್ನ ಶುಭಾಶಯಗಳು. ಇದು ನಿಮ್ಮ ದೊಡ್ಡ ಸಿನಿಮಾ ಆಗಬಹುದು ಎಂಬುದು ನನ್ನ ಸಲಹೆ. ಏಕೆಂದರೆ ಇದು ನಿಮ್ಮ ಕಲಾ ಜೀವನದ ಅತ್ಯುನ್ನತ ಹಂತವಾಗಿದೆ. ಹೆಮ್ಮೆಯಿಂದಿರಿ. ಅನೇಕ ಹೊಸ ಎತ್ತರಗಳ ಹುಡುಕಾಟದಲ್ಲಿರಿ' ಎಂದು ತಮಿಳಿನಲ್ಲಿ ಬರೆದುಕೊಂಡಿದ್ದಾರೆ.
ಇಂಡಿಯಾ -2 ಕೂಡ ಭಾರಿ ನಿರಿಕ್ಷೆ ಮೂಡಿಸಿದ ಸಿನಿಮಾಗಳಲ್ಲಿ ಒಂದಾಗಿದೆ. 'ಇಂಡಿಯನ್ 2' ಬಿಡುಗಡೆ ದಿನಾಂಕ ಇನ್ನೂ ಘೋಷಿಸಲಾಗಿಲ್ಲ. ಆದರೆ ಈ ಸಿನಿಮಾ 2024 ರ ಪೊಂಗಲ್‌ಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಅವರಿಗೆ ನಟ ಕಮಲ್ ಹಾಸನ್ ಸೋಮವಾರ ಹೊಸ ಕಾರು ಉಡುಗೊರೆಯಾಗಿ ನೀಡಿದ್ದಾರೆ. ಕಮಲ್ ಹಾಸನ್ ಅವರು ಶರ್ಮಿಳಾ ಅವರನ್ನು ಅವರ ಕುಟುಂಬದೊಂದಿಗೆ ಸೋಮವಾರ ಬೆಳಿಗ್ಗೆ ಅಲ್ವಾರ್‌ಪೇಟ್‌ನಲ್ಲಿರುವ ಅವರ ಚೆನ್ನೈ ಕಚೇರಿಗೆ ಆಹ್ವಾನಿಸಿ, ಹೊಸ ಕಾರು ಖರೀದಿಗೆ ಮತ್ತು ಉದ್ಯಮಿಯಾಗಿ ಅವರ ಪ್ರಯಾಣವನ್ನು ಮುಂದುವರಿಸಲು ಚೆಕ್ ಅನ್ನು ಹಸ್ತಾಂತರಿಸಿದರು.