ಕರ್ನಾಟಕದಲ್ಲಿ 'ಥಗ್ ಲೈಫ್' ಸಿನಿಮಾ ಬಿಡುಗಡೆಗಾಗಿ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್| kamal-haasan

Kamal Haasan
Published on

ಮಣಿರತ್ನಂ ನಿರ್ದೇಶನದ 'ಥಗ್ ಲೈಫ್' ಚಿತ್ರದ ಸುತ್ತಲಿನ ವಿವಾದದ ನಂತರ ಕಮಲ್​ ಕೋರ್ಟ್​ ಮೊರೆ ಹೋಗುವಂತಾಗಿದೆ. ಕನ್ನಡ ಭಾಷೆಯ ಬಗ್ಗೆ ನಟ ಇತ್ತೀಚೆಗೆ ಮಾಡಿದ ಹೇಳಿಕೆಗಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸಿದೆ. ರಾಜ್‌ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್‌ನ ಸಿಇಒ ಮೂಲಕ, ನಟ ಈ ಮನವಿಯನ್ನು ಸಲ್ಲಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಯಾವುದೇ ವಿರೋಧ ಬಾರದಂತೆ ಕಾನೂನು ಆಶ್ರಯ ನೀಡುವಂತೆ ನಟ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇನ್ನೂ ಕಮಲ್​ ಹಾಸನ್ ಸಿನಿಮಾಗೆ ಕನ್ನಡಿಗರಿಂದ ತೀವ್ರ ವಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ, ತಮ್ಮ ಹೊಸ ಸಿನಿಮಾ 'ಥಗ್ ಲೈಫ್' ಬಿಡುಗಡೆಗೆ ಕಾನೂನು ಆಶ್ರಯವನ್ನು ಕೋರಿ ನಟ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಿನಿಮಾ 2025ರ ಜೂನ್ 5ರಂದು ರಾಜ್ಯಾದ್ಯಾಂತ ಬಿಡುಗಡೆಯಾಗಬೇಕಿದ್ದು, ಈಗಾಗಲೇ ಕರ್ನಾಟಕದಲ್ಲಿ ಹಲವಾರು ಕನ್ನಡ ಪರ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಚಿತ್ರಮಂದಿರದ ಎದುರು ಪ್ರತಿಭಟನೆಗಳು ನಡೆಯುತ್ತಿದ್ದು, ಚಿತ್ರ ಪ್ರದರ್ಶನ ತಡೆಗೆ ಆಗ್ರಹ ಜೋರಾಗಿದೆ.

ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಭಾರೀ ವಿವಾದ ಸೃಷ್ಟಿಯಾಗಿದೆ. ಈ ಬಗ್ಗೆ ಯಾವುದೇ ಇತಿಹಾಸ ಇಲ್ಲದಿದ್ದರೂ ಪದೇ ಪದೇ ತಮಿಳು ಭಾಷೆಯನ್ನು ಎತ್ತಿ ಮೇಲೆ ಕಟ್ಟುವ ಕೆಲಸ ಮಾಡಲಾಗುತ್ತಿದೆ.

ಕಮಲ್ ಅರ್ಜಿಯಲ್ಲಿ ಹೇಳಿರುವುದೇನು.?

ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಅಗತ್ಯ ನಿರ್ದೇಶನ ನೀಡಬೇಕೆಂದು ಕೋರಿಕೆ.

ಸರ್ಕಾರ, ಪೊಲೀಸ್ ಇಲಾಖೆ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಚಿತ್ರ ಪ್ರದರ್ಶನವನ್ನು ತಡೆಯದಂತೆ ನಿಷೇಧಾಜ್ಞೆ ನೀಡಬೇಕೆಂದು ಮನವಿ.

ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲದಂತೆ ಮತ್ತು ಸೂಕ್ತ ಭದ್ರತೆ ಒದಗಿಸಬೇಕೆಂದು ಅರ್ಜಿ ಸಲ್ಲಿಕೆ.

(ಏಜೆನ್ಸೀಸ್)

ಹೆಚ್ಚುತ್ತಿರುವ ಟೀಕೆಗಳ ನಡುವೆಯೂ ಕಮಲ್​ ಹಾಸನ್ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಕಾನೂನಿನ ನಿಯಮವನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ. ಭಾರತವನ್ನು ಪ್ರಜಾಪ್ರಭುತ್ವ ದೇಶ ಎಂದು ಉಲ್ಲೇಖಿಸಿದ ನಟ, ತಾನು ತಪ್ಪು ಮಾಡಿಲ್ಲದಿದ್ದರೆ ತಾನು ಮಾಡಿದ್ದಕ್ಕೆ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದರು. ಕನ್ನಡದ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ಕನ್ನಡ ಪರ ಗುಂಪುಗಳು ಕರೆ ನೀಡಿವೆ. ನಾನು ನ್ಯಾಯ ಮತ್ತು ಕಾನೂನಿನ ನಿಯಮವನ್ನು ಬೆಂಬಲಿಸುತ್ತೇನೆ. ನಾನು ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕವನ್ನು ನಿಜವಾಗಿಯೂ ಪ್ರೀತಿಸುತ್ತೇನೆ. ಅದನ್ನು ಪ್ರಶ್ನಿಸುವವರು ಉದ್ದೇಶ ಹೊಂದಿರುವವರು ಮಾತ್ರ. ಇದಕ್ಕೂ ಮೊದಲು, ನನಗೆ ಬೆದರಿಕೆ ಹಾಕಲಾಗಿತ್ತು ನಾನು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ ಇಲ್ಲದಿದ್ದರೆ ನಾನು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net