ಕಾಶ್ಮೀರದಲ್ಲಿ ಜನಮತ ಸಂಗ್ರಹಿಸುವಂತೆ ತಮಿಳುನಾಡು ಹಿರಿಯ ನಟ ಕಮಲ್​ಹಾಸನ್​ ಆಗ್ರಹ

ಚೆನ್ನೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಕೊನೆಗೊಂಡು ಶಾಂತಿ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ಸ್ಥಳೀಯರ ಜನಮತ ಸಂಗ್ರಹಿಸುವಂತೆ ತಮಿಳುನಾಡಿನ ಹಿರಿಯ ನಟ ಹಾಗೂ ಮಕ್ಕಳ್​ ನೀಧಿ ಮಯ್ಯಂ ಪಕ್ಷದ ಮುಖಂಡ ಕಮಲ್​ಹಾಸನ್​ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಅವರು, ಕಾಶ್ಮೀರದಲ್ಲಿ ಜನಮತ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಹಿಂದೇಟು ಹಾಕುತ್ತಿರುವುದು ಏಕೆ ಎಂದು ಪ್ರಶ್ನಿಸುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ಹಿಂಸಾಪೀಡಿತ ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯ ಅರಿವಿದ್ದರೂ ಕಮಲ್​ಹಾಸನ್​ ಇಂತಹ ಪ್ರಶ್ನೆ ಕೇಳಿರುವ ಬಗ್ಗೆ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಮಲ್​ಹಾಸನ್​ ಅವರ ಬೌಧಿಕ ಮಟ್ಟ ಕುಸಿದಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.