More

    30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ

    ಕಂಪ್ಲಿ: ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮಾರುತ್ತಿರುವ ಪಟ್ಟಣದ ಅಂಗಡಿ, ಹೋಟೆಲ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದ ಪುಪರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದಿದೆ.

    ಈ ವೇಳೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಡಾ.ಎನ್.ಶಿವಲಿಂಗಪ್ಪ, ಜು.1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಸ ವಿಲೇವಾರಿ ಗಾಡಿಗಳಲ್ಲಿ ಧ್ವನಿವರ್ಧಕ ಮೂಲಕ, ಅಂಗಡಿ ಮುಂಗಟ್ಟುಗಳಿಗೆ ಮೂರು ಬಾರಿ ನೋಟಿಸ್ ನೀಡಿದೆ. ನಿಷೇಧಿತ ಪ್ಲಾಸ್ಟಿಕ್ ಬಳಕೆ ತಗ್ಗದ ಕಾರಣ ದಿಢೀರ್ ದಾಳಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 11 ಅಂಗಡಿಗಳಿಗೆ 9 ಸಾವಿರ ರೂ.ದಂಡ ವಿಧಿಸಿದೆ ಎಂದರು.

    ಏಕ ಬಳಕೆಯ ಪ್ಲಾಸ್ಟಿಕ್ ಬಳಸುವುದನ್ನು ಸಾರ್ವಜನಿಕರು ತ್ಯಜಿಸಿ, ಮಾರುಕಟ್ಟೆಗೆ ಬರುವಾಗ ಮನೆಯಿಂದಲೇ ಬಟ್ಟೆ ಚೀಲ ತರುವಲ್ಲಿ ಜಾಗೃತಿ ತೋರಬೇಕು. ಈ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು. ಉದಾಸೀನ ತೋರಿದಲ್ಲಿ ಇನ್ನಷ್ಟು ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts