More

    ಕಂಪ್ಲಿಯಲ್ಲಿ ಸೆ.11ರಂದು ಜಿಲ್ಲಾ ಮಟ್ಟದ ರೈತ ಸಮಾವೇಶ; ರೈತ ಸಂಘದ ಪ್ರ.ಕಾರ್ಯದರ್ಶಿ ಜೀರ್ ಕಾರ್ತಿಕ್ ಹೇಳಿಕೆ

    ಕಂಪ್ಲಿ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಸೆ.11ರಂದು ಜಿಲ್ಲಾ ಮಟ್ಟದ ಬೃಹತ್ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಪ್ರಧಾನ ಕಾರ್ಯದರ್ಶಿ ಜೀರ್ ಕಾರ್ತಿಕ್ ಹೇಳಿದರು.

    ಪಟ್ಟಣದ ಅತಿಥಿಗೃಹ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ರೈತ ಸಂಘದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರೈತ ಸಮಾವೇಶದಲ್ಲಿ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಕರೊನಾ ಲಾಕ್‌ಡೌನ್ ವೇಳೆ ಕೇಂದ್ರ, ರಾಜ್ಯ ಸರ್ಕಾರ ಎಪಿಎಂಸಿ, ಭೂ ಸುಧಾರಣೆ, ಭೂ ಸ್ವಾಧೀನ, ವಿದ್ಯುತ್‌ಚ್ಛಕ್ತಿ ಹಾಗೂ ಅಗತ್ಯ ವಸ್ತುಗಳ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಖಂಡನೀಯವಾಗಿದ್ದು, ಹಿಂಪಡೆಯಬೇಕು. ಕಂಪ್ಲಿ ಸಕ್ಕರೆ ಕಾರ್ಖಾನೆಯ 176 ಎಕರೆ ಭೂಮಿ ಪರಭಾರೆ ಮಾಡಬಾರದು. ಆ ಪ್ರದೇಶದಲ್ಲಿ ಸರ್ಕಾರಿ ಇಲ್ಲವೇ ಸಹಕಾರಿ ವಲಯದ ಸಕ್ಕರೆ ಕಾರ್ಖಾನೆ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಲಾಗುವುದು ಎಂದರು.

    ಸಂಘದ ಜಿಲ್ಲಾಧ್ಯಕ್ಷ ಪಿ.ನಾರಾಯಣರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಶಾಶ್ವತ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಸರ್ಕಾರವೇ ಭತ್ತ ಖರೀದಿಸಬೇಕು. ರೈತರ ಪಂಪ್‌ಸೆಟ್‌ಗಳಿಗೆ 12ತಾಸು ಉಚಿತ ವಿದ್ಯುತ್ ಪೂರೈಸುವುದರ ಕುರಿತು ಚರ್ಚಿಸಿ ಹೋರಾಟದ ರೂಪುರೇಷೆ ರೂಪಿಸಲಾಗುವುದು ಎಂದು ತಿಳಿಸಿದರು.

    ಸಂಘದ ತಾಲೂಕು ಅಧ್ಯಕ್ಷ ಕಾಸಿಂಸಾಬ್, ನಗರ ಅಧ್ಯಕ್ಷ ಕೊಟ್ಟೂರು ರಮೇಶ್, ಪ್ರಮುಖರಾದ ಚೆಲ್ಲಾ ವೆಂಕಟನಾಯ್ಡು, ವಿ.ಟಿ.ನಾಗರಾಜ, ಬಿ.ವಿ.ಗೌಡ, ಕಾಗಿ ಈರಣ್ಣ, ಮುರಾರಿ, ಬಿ.ಕೆ.ದೇವೇಂದ್ರ, ಸುದರ್ಶನ, ಕುರಿ ವೀರೇಶ್, ಬಿ.ಎಂ.ಮಣಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts