ಕಂಪ್ಲಿ: ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಲಿ ಎಂದು ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಫೆಡರೇಷನ್ ತಾಲೂಕು ಅಧ್ಯಕ್ಷ ಐ.ಹೊನ್ನೂರಸಾಬ್ ಹೇಳಿದರು.
ಆ.5 ರಂದು ಹಮ್ಮಿಕೊಂಡಿರುವ ಸಿಎಂ ಮನೆ ಚಲೋ ಪ್ರತಿಭಟನೆಯ ಭಿತ್ತಿಪತ್ರ, ಕರಪತ್ರಗಳನ್ನು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು. ನೈಜ ಕಾರ್ಮಿಕರ ನೋಂದಣಿ, ಮರು ನೋಂದಣಿ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸುವುದನ್ನು ನಿಲ್ಲಿಸಬೇಕು. ಸೌಲಭ್ಯಗಳಿಗಾಗಿ ಸಲ್ಲಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಪಿಂಚಣಿದಾರರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಬೇಕು ಎಂದರು.
ಫೆಡರೇಷನ್ ತಾಲೂಕು ಪ್ರಧಾನ ಕಾರ್ಯದರ್ಶಿ ಆರ್.ನಾಗರಾಜ, ಪದಾಧಿಕಾರಿಗಳಾದ ದೇವಲಾಪುರ ಮೈಲಪ್ಪ, ಅಬ್ದುಲ್ ನವಾಜ್, ಹಡಪದ ಆನಂದ, ನಬೀಸಾಬ್, ಚನ್ನಪ್ಪ, ಮಂಜುನಾಥ ಇತರರಿದ್ದರು.