More

    ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ

    ಕಂಪ್ಲಿ: ಇಲ್ಲಿನ ಸತ್ಯನಾರಾಯಣಪೇಟೆಯ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಶನಿವಾರ ರಾಜ್ಯ ಜಿಪಿಟಿ ಶಿಕ್ಷಕರ ಕಾರ್ಯಾಗಾರ ನಡೆಯಿತು.

    ಜಿಪಿಟಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಹುಲುಕೋಟಿ ಮಾತನಾಡಿ, ಶಿಕ್ಷಕ ಸೇವೆ ಪಾವಿತ್ರೃತೆಯಿಂದ ಕೂಡಿದ್ದು, ಮಕ್ಕಳನ್ನು ಶಿಕ್ಷಣವಂತರನ್ನಾಗಿ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ. ಮಕ್ಕಳ ಪ್ರತಿಭೆ ಗುರುತಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

    ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಾಪುರ ವೀರೇಶ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. 56 ಜನ ನೂತನ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಎಚ್.ದೊಡ್ಡಬಸಪ್ಪ, ಜಿಪಿಟಿ ಶಿಕ್ಷಕರ ಸಂಘದ ತಾಲೂಕು ಪದಾಧಿಕಾರಿಗಳಾದ ನಿಂಗರಾಜ, ನಿರಂಜನಮೂರ್ತಿ, ಸರ್ವೇಶ್, ಆದೆಪ್ಪ, ಚಂದ್ರಯ್ಯ, ಮಂಜುನಾಥ, ಅಂಬರೀಷ, ಪಂಪನಗೌಡ, ಮಾಬಾಷಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ.ನಾಗನಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts