More

    ಷರತ್ತುರಹಿತ ಭತ್ತ ಖರೀದಿ ಕೇಂದ್ರ ಆರಂಭಿಸಿ: ಕಂಪ್ಲಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹ

    ಕಂಪ್ಲಿ: ಜಿಲ್ಲೆಯಲ್ಲಿ ಷರತ್ತು ರಹಿತವಾಗಿ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಸೋಮವಾರ ತಹಸೀಲ್ದಾರ್ ಗೌಸಿಯಾಬೇಗಂಗೆ ಮನವಿ ಸಲ್ಲಿಸಿತು.

    ಜಿಲ್ಲಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ದಿನೇ ದಿನೇ ಕೃಷಿ ನಿರ್ವಹಣಾ ವೆಚ್ಚ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಮಾರುಕಟ್ಟೆಯಲ್ಲಿ ಬೆಳೆಗೆ ಸೂಕ್ತ ಬೆಲೆ ಇಲ್ಲ. ಭತ್ತ ಕಟಾವು ಸಮಯದಲ್ಲಿ ಭತ್ತ ಧಾರಣೆ ಕುಸಿದಿದೆ. ರೈತರ ಹಿತಾಸಕ್ತಿಗಾಗಿ ಜಿಲ್ಲಾಡಳಿತ ಕೂಡಲೇ ಜಿಲ್ಲಾದ್ಯಂತ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಭತ್ತ ಖರೀದಿಸಿದ ವಾರದೊಳಗೆ ರೈತರ ಖಾತೆಗೆ ಹಣ ಜಮೆಯಾಗಬೇಕು. ಕ್ವಿಂಟಾಲ್‌ಗೆ ಮೂರು ಸಾವಿರ ರೂ. ದರದಂತೆ ಸರ್ಕಾರ ಭತ್ತ ಖರೀದಿಸಬೇಕು. ಬೇರೆ ರಾಜ್ಯದಿಂದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿಸದೆ ಕರ್ನಾಟಕದ ರೈತರಿಂದ ಕೊಂಡುಕೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಆನಂದರೆಡ್ಡಿ, ತಾಲೂಕು ಅಧ್ಯಕ್ಷ ಕಾಸಿಂಸಾಬ್, ನಗರ ಅಧ್ಯಕ್ಷ ಕೊಟ್ಟೂರು ರಮೇಶ್, ಪದಾಧಿಕಾರಿಗಳಾದ ಮುರಾರಿ, ಚೆಲ್ಲಾ ವೆಂಕಟನಾಯ್ಡು, ದೇವೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts