More

    ಸ್ವಾಭಿಮಾನದ ಬದುಕಿಗಾಗಿ ಆರ್ಥಿಕ ಸ್ವಾವಲಂಬನೆ ಸಾಧಿಸಿ

    ಕಂಪ್ಲಿ:ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಆರ್ಥಿಕ ಸ್ವಾವಲಂಬನೆ ಸಾಧಿಸುವಲ್ಲಿ ಜಾಗೃತಿ ತೋರಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿವಿ ಸಂಚಾಲಕಿ ಬಿ.ಕೆ.ಸಕಲೇಶ್ವರಿ ಹೇಳಿದರು.

    ಪಟ್ಟಣದ ಕೆ.ಎಸ್.ಭವನದಲ್ಲಿ ಸ್ಥಳೀಯ ಅಕ್ಕಮಹಾದೇವಿ ಮಹಿಳಾ ಮಂಡಳಿ, ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. ಮಹಿಳೆಯರು ಆತ್ಮವಿಶ್ವಾಸದೊಂದಿಗೆ ಹೊಸ ಕ್ಷೇತ್ರಗಳಲ್ಲಿ ಸಾಧನೆಯತ್ತ ಸಾಗಬೇಕಿದೆ. ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ರಾಜಯೋಗ ಶಿಕ್ಷಣ, ಧ್ಯಾನ, ಪ್ರಾಣಾಯಾಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

    ಶ್ರೀದೇವಿ ಜೆ.ಎನ್.ಗಣೇಶ್ ಮಾತನಾಡಿ, ಮಹಿಳೆಯರು ಸಂಘಟಿತರಾಗುವ ಮೂಲಕ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಲು ಮುಂದಾಗಬೇಕು. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಯಶಸ್ವಿಯಾಗಬೇಕು ಎಂದರು.

    ಮುಕ್ಕುಂದಿ ಮಮತ ಮಾತನಾಡಿ, ಮಹಿಳೆಯರು ರಾಜಕೀಯ ಪ್ರಾತಿನಿಧ್ಯತೆಗಳಿಸುವಲ್ಲಿ ಜಾಗೃತಿವಹಿಸಬೇಕು.ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಪುರುಷರಿಗೆ ಕಡಿಮ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರು, ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಮಕ್ಕಳಿಂದ ಭರತನಾಟ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿದವು. ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಮುಕ್ಕುಂದಿ ಶಿವಗಂಗಮ್ಮ ,ಯೋಗ ಶಿಕ್ಷಕಿ ವಿಜಯಲಕ್ಷ್ಮೀ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ.ಅನ್ನಪೂರ್ಣ ಗುಡದೂರು, ಪ್ರಮುಖರಾದ ಸ್ವಪ್ನ ಉದಯಶಂಕರ್, ಹೊನ್ನಳ್ಳಿ ಶ್ರೀದೇವಿ, ಸುನೀತಾ ಪೂಜಾರ್, ಹೇಮಲತಾ ಶಾಂತಾಗೌಡ, ಅಕ್ಕಮಹಾದೇವಿ ಮಹಿಳಾ ಮಂಡಳಿ ಸದಸ್ಯೆಯರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts