More

    ಬೀದಿ ವ್ಯಾಪಾರಿಗಳು ಸ್ವಚ್ಛತೆ ಕಾಪಾಡಲಿ: ಪುರಸಭೆ ಮುಖ್ಯಾಧಿಕಾರಿ ಡಾ.ಎನ್.ಶಿವಲಿಂಗಪ್ಪ ಹೇಳಿಕೆ

    ಕಂಪ್ಲಿ: ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಬೀದಿ ವ್ಯಾಪಾರಿಗಳು ಜಾಗೃತಿ ತೋರಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಡಾ.ಎನ್.ಶಿವಲಿಂಗಪ್ಪ ಹೇಳಿದರು.

    ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಡೇ ನಲ್ಮ್ ಯೋಜನೆಯಡಿ, ಪ್ರಧಾನಮಂತ್ರಿಗಳ ಬೀದಿವ್ಯಾಪಾರಿಗಳು ಆತ್ಮನಿರ್ಭರ್ ನಿಧಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಐಡಿಕಾರ್ಡ್, ಪ್ರಮಾಣಪತ್ರ ವಿತರಣಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು. ಬೀದಿ ವ್ಯಾಪಾರಿಗಳು ಪುರಸಭೆಯಿಂದ ಕೊಟ್ಟಿರುವ ಡ್ರಂ ಬಳಸಿ ಕಸ, ತ್ಯಾಜ್ಯವನ್ನು ಸಂಗ್ರಹಿಸಬೇಕು ಎಂದರು.

    ಸ್ಥಾಯಿಸಮಿತಿ ಅಧ್ಯಕ್ಷ ಸಿ.ಆರ್.ಹನುಮಂತ ಮಾತನಾಡಿ, ಸರ್ಕಾರ ಒದಗಿಸಿದ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. 200ಜನ ಬೀದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್, ಪ್ರಮಾಣಪತ್ರ ವಿತರಿಸಲಾಯಿತು. ಪುರಸಭೆ ಅಧ್ಯಕ್ಷೆ ಶಾಂತಲಾ ವಿ.ವಿದ್ಯಾಧರ, ಉಪಾಧ್ಯಕ್ಷೆ ನಿರ್ಮಲಾ ಕೆ.ವಸಂತ್, ಬೀದಿವ್ಯಾಪಾರಿಗಳ ಸಂಘದ ಅಧ್ಯಕ್ಷ ರಾಮಾಂಜಿನಿ, ಟಿವಿಸಿ ಸಮಿತಿ ಸದಸ್ಯರಾದ ರಂಗಪ್ಪ, ಕೃಷ್ಣ, ಖಾಸಿಂವಲಿ, ವನಿತಾ, ಭವಾನಿ, ಸಿದ್ದಪ್ಪ, ಸಮುದಾಯ ಸಂಘಟನಾಧಿಕಾರಿ ಎಂ.ವಸಂತಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts