More

    ದಾಸ ಸಾಹಿತ್ಯಕ್ಕೆ ಕನಕ ದಾಸರ ಕೊಡುಗೆ ಅಪಾರ; ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ: ದಾಸ ಸಾಹಿತ್ಯಕ್ಕೆ ವೈಚಾರಿಕ ನೆಲೆಗಟ್ಟು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.

    ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಂತ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಕ್ಲಿಷ್ಟಕರ ಹಾಗೂ ಸಮಾಜದಲ್ಲಿ ಮೌಢ್ಯತೆ ತುಂಬಿದ ಸಂದರ್ಭದಲ್ಲಿ ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

    ಆಧ್ಯಾತ್ಮಿಕ, ಸಾಮಾಜಿಕ ಮತ್ತು ವೈಚಾರಿಕ ಪ್ರಜ್ಞೆ ಬೆಳೆಸಿದ ಕನಕದಾಸರ ತತ್ವಾದರ್ಶಗಳು ದಾರಿದೀಪವಾಗಿವೆ. ದೇಶದ ಭವ್ಯವಾದ ಸಂಸ್ಕೃತಿ, ಪರಂಪರೆ ಇಲ್ಲಿನ ದಾರ್ಶನಿಕರ ವಿಚಾರಧಾರೆಗಳನ್ನು ಅವರ ಚಿಂತನೆಗಳನ್ನು ಇಡೀ ವಿಶ್ವವೇ ಅನುಸರಿಸುತ್ತಿದ್ದೆ. ಇಂತಹ ಶ್ರೇಷ್ಠ ಸಂತರು, ಸತ್ಪುರುಷರು ದೇಶ, ನಾಡನ್ನು ಬೆಳಗಿದ್ದಾರೆ ಎಂದು ಹೇಳಿದರು.

    ದಾಸಸಾಹಿತ್ಯ, ಪದಗಳ ಮೂಲಕ ಸಮಾಜದ ಓರೆ-ಕೊರೆಗಳನ್ನು ತಿದ್ದಿ, ಅನಿಷ್ಠ ಪದ್ಧತಿಗಳು, ಮೂಢನಂಬಿಕೆಗಳನ್ನು ತೊಡೆದು ಹಾಕಲು ಶ್ರಮಿಸಿದವರಾಗಿದ್ದು, ಇಂತಹ ಶ್ರೇಷ್ಠರ ತತ್ವಾದರ್ಶನಗಳನ್ನು ಅಳವಡಿಸಿಕೊಂಡು ನಡೆಯಬೇಕು ಎಂದು ಹೇಳಿದರು.

    ವಿಶೇಷ ಉಪನ್ಯಾಸ ನೀಡಿದ ನ್ಯಾಯವಾದಿ ವಿದ್ಯಾವತಿ ಅಂಕಲಗಿ, ಸಮಾಜದಲ್ಲಿನ ಮೂಢನಂಬಿಕೆಗಳನ್ನು ಹೋಗಲಾಡಿಸಲು ಹಾಗೂ ಜನರಲ್ಲಿ ವೈಚಾರಿಕ ಮನೋಭಾವ ಬೆಳೆಸುವಲ್ಲಿ ಕನಕದಾಸರ ಕೀರ್ತನೆಗಳು ಅಪಾರ ಕೊಡುಗೆಯಾಗಿವೆ ಎಂದು ಹೇಳಿದರು.

    ಇದಕ್ಕೂ ಮೊದಲು ನಗರದ ಕನಕದಾಸ ವೃತ್ತದಲ್ಲಿ ಕನಕದಾಸ ಪ್ರತಿಮೆಗೆ ಸಚಿವರು ಪುಷ್ಪಾರ್ಚನೆ ಸಲ್ಲಿಸಿದರು. ಗೀತಾ ಕುಲಕರ್ಣಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

    ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಚಾಲನೆ ನೀಡಿದರು. ನಿವೃತ್ತ ಶಿಕ್ಷಕ ಮಮದಾಪೂರ ಅವರು ನಿರೂಪಿಸಿ, ವಂದಿಸಿದರು.

    ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಉಪ ಆಯುಕ್ತ ಮಹಾವೀರ ಬೋರಣ್ಣವರ, ಜಿಪಂ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಸಮಾಜದ ಮಲ್ಲಣ್ಣ ಶಿರಶ್ಯಾಡ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts