More

    ಎಲ್ಲರೂ ದಾಸಶ್ರೇಷ್ಠರನ್ನು ಸ್ಮರಿಸಿ

    ತಿ.ನರಸೀಪುರ: ಮಾನವೀಯ ಮೌಲ್ಯಗಳನ್ನು ಪ್ರಚುರಪಡಿಸಿದ ಕನಕದಾಸರಂತಹ ದಾಸಶ್ರೇಷ್ಠರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಅಭಿಪ್ರಾಯಪಟ್ಟರು.
    ಪಟ್ಟಣದ ಶ್ರೀ ಗುಂಜಾನರಸಿಂಹ ದೇವಾಲಯದ ಮುಂಭಾಗ ತಾಲೂಕು ಕುರುಬರ ಸಂಘದಿಂದ ಆಯೋಜಿಸಿದ್ದ ಭಕ್ತ ಕನಕದಾಸ ಜಯಂತ್ಯುತ್ಸವದ ಮೆರವಣಿಗೆಯಲ್ಲಿ ನಂದಿಕಂಬಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
    ಜಾತಿರಹಿತವಾದ ಸಮಾಜ ನಿರ್ಮಾಣಕ್ಕೆ ವಾಲ್ಮೀಕಿ, ಕನಕದಾಸರು, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರು ತಮ್ಮದೇ ಆದ ರೀತಿಯಲ್ಲಿ ಶ್ರಮಿಸಿದರು. ಇವರೆಲ್ಲರ ಆದರ್ಶ, ತತ್ವ, ಸಂದೇಶಗಳು ಸಂವಿಧಾನದಲ್ಲಿ ಸೇರಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಾತಿಮುಕ್ತ ಸಮಾಜ ನಿಮಾರ್ಣದ ಜತೆಗೆ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
    ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು. ಮೆರವಣಿಗೆಯು ತೇರಿನ ಬೀದಿ, ಭಗವಾನ್ ವೃತ್ತ, ಲಿಂಕ್ ರಸ್ತೆ, ಜೋಡಿ ರಸ್ತೆ ಮಾರ್ಗವಾಗಿ ತಾಲೂಕು ಕಚೇರಿ ಮುಂಭಾಗಕ್ಕೆ ತೆರಳಿತು. ಕನಕದಾಸರ ಪ್ರತಿಮೆ, ಡೊಳ್ಳು ಕುಣಿತ, ಗೊರವರ ಕುಣಿತ, ಕೀಲು ಗೊಂಬೆ, ಪೂಜಾ ಕುಣಿತ ಹಾಗೂ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ತಂದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts