More

    30ರಂದು ಕನಕದಾಸರ ಜಯಂತಿ ಆಚರಣೆ

    ಸೋಮವಾರಪೇಟೆ: ಸೋಮವಾರಪೇಟೆ ಮತ್ತು ಕುಶಾಲನಗರ ಎರಡೂ ತಾಲೂಕಿನವರು ಒಟ್ಟಾಗಿ ಸೇರಿ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ನ.30ರಂದು ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

    ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರಭಾಕರ್ ಮಾತನಾಡಿ, ಈ ಬಾರಿ ಕಾರ್ಯಕ್ರಮದಲ್ಲಿ 15 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು. ಕಾರ್ಯಕ್ರಮದಲ್ಲಿ ಆಶ್ರಮ ಶಾಲಾ ವಿದ್ಯಾರ್ಥಿಗಳು, ಐಟಿಡಿಪಿ ಇಲಾಖೆ ಮತ್ತು ಸುತ್ತಲಿನ ಶಾಲಾ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ನೀಡಿದರು.

    ಅಂದು ಸರ್ಕಾರಿ ರಜೆ ಇರುವುದರಿಂದ ಎಲ್ಲ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಬೇಕೆಂದು ಜಿಲ್ಲಾ ಸಮಿತಿ ಉಪಾಧ್ಯಕ್ಷ ಚಿನ್ನಯ್ಯ ತಹಸೀಲ್ದಾರರಲ್ಲಿ ಮನವಿ ಮಾಡಿದರು.

    ತಹಸೀಲ್ದಾರ್ ಎಸ್.ಎನ್. ನರಗುಂದ ಮಾತನಾಡಿ, ಇಂದಿನ ಸಭೆಗೆ ಹೆಚ್ಚಿನವರು ಗೈರಾಗಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಆಚರಣಾ ಸಮಿತಿ ಸದಸ್ಯರು ಆಗಮಿಸಿ ಸಲಹೆ, ಸೂಚನೆಗಳನ್ನು ನೀಡಿದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿಸಲು ಸಾಧ್ಯ ಎಂದು ಹೇಳಿದರು.

    ವೇದಿಕೆ ಸಂಘಟನಾ ಕಾರ್ಯದರ್ಶಿ ಭರಮಣ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

    ಪೂರ್ವಭಾವಿ ಸಭೆಗೆ ಕೆಲವು ಇಲಾಖಾಧಿಕಾರಿಗಳನ್ನು ಹೊರತುಪಡಿಸಿದಂತೆ ಹೆಚ್ಚಿನ ಇಲಾಖೆಯಿಂದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಸಭೆ ನಿರ್ಣಯಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts