More

    ಕಾಂಗ್ರೆಸ್ ಟಿಕೆಟ್‌ಗಾಗಿ ಭವಾನಿಮಠ ಅರ್ಜಿ

    ಕನಕಗಿರಿ: ಕ್ಷೇತ್ರದಲ್ಲಿ ಹಾಲಿ ಶಾಸಕರಿದ್ದರೂ 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಟಿಕೆಟ್ ಪಡೆಯಲು ಹಲವರು ಪೈಪೋಟಿ ನಡೆಸಿರುವ ನಡುವೆ ಕಾಂಗ್ರೆಸ್ ಟಿಕೆಟ್‌ಗೂ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ. ಮಾಜಿ ಜಿಪಂ ಅಧ್ಯಕ್ಷ ಮುಕುಂದರಾವ್ ಭವಾನಿಮಠ ತಮಗೆ ಟಿಕೆಟ್ ನೀಡುವಂತೆ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

    2018ರ ಚುನಾವಣೆಯಲ್ಲಿ ಡಿಸಿಸಿ ಅಧ್ಯಕ್ಷ ಶಿವರಾಜ ತಂಗಡಗಿ ಸೋತರು ಮುಂದಿನ ಚುನಾವಣೆಗೆ ತಮಗೆ ಟಿಕೆಟ್ ಸಿಗಲಿದೆ ಎನ್ನುವ ಭರವಸೆಯಲ್ಲಿದ್ದಾರೆ.

    2008ರ ಚುನಾವಣೆಯಲ್ಲಿ ತಂಗಡಗಿ ವಿರುದ್ಧ 2,183 ಅಂತರದಿಂದ ಸೋತ ಭವಾನಿಮಠ ನಂತರ ಪಕ್ಷ ಬದಲಾಯಿಸಿ 2013 ಚುನಾವಣೆಯಲ್ಲಿ ಬಿಎಸ್‌ಆರ್‌ನಿಂದ ಸ್ಪರ್ಧಿಸಿ 28,117 ಮತ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಆ ಬಳಿಕ ಬಿಜೆಪಿ ಸೇರ್ಪಡೆಗೊಂಡರಾದರೂ ನಂತರ ಅವರು ಪುನಃ ಮಾತೃಪಕ್ಷ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

    ಜಾತಿ ಲೆಕ್ಕಾಚಾರದಲ್ಲಿ ಭವಾನಿಮಠ ಅರ್ಜಿ ?
    ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ಸಂಘಟಿಸಿದ್ದ ಭವಾನಿಮಠಗೆ ಕ್ಷೇತ್ರವು ಮೀಸಲಾದ ಮೊದಲ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡಿತ್ತು. ಆದರೆ, ಪಕ್ಷೇತರರಾಗಿ ಸ್ಪರ್ಧಿಸಿದ್ದ ತಂಗಡಗಿ ವಿರುದ್ಧ ಅಲ್ಪ ಮತಗಳಿಂದ ಭವಾನಿಮಠ ಸೋಲು ಕಂಡಿದ್ದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಗೆ ಭವಾನಿಮಠ ಆಪ್ತರಾಗಿದ್ದು, ಜಾತಿ ಲೆಕ್ಕಾಚಾರದಲ್ಲಿ ಈ ಬಾರಿ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

    ವಿದ್ಯಾರ್ಥಿ ದೆಸೆಯಿಂದಲೂ ಜೀವನ ಮುಡಿಪಿಟ್ಟು ಕಾಂಗ್ರೆಸ್ ಪಕ್ಷ ಸಂಘಟಿಸಿದ್ದೇನೆ. ಕೆಲ ಪ್ರಮಾದದಿಂದ ಪಕ್ಷ ಬಿಟ್ಟಿದ್ದು, ಪಕ್ಷಕ್ಕೆ ಬಂದಿದ್ದೇನೆ. ನಾನು ಮೂಲ ಕಾಂಗ್ರೆಸ್ಸಿಗನಾಗಿದ್ದು, ನಮ್ಮ ಸಮುದಾಯಕ್ಕೂ ನ್ಯಾಯ ಸಿಗಲಿ ಎಂದು ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದೇನೆ.
    | ಮುಕುಂದ ರಾವ್ ಭವಾನಿಮಠ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts