More

    ಭಯ ಬಿಟ್ಟು ವೈಯಕ್ತಿಕ ಕಾಳಜಿ ವಹಿಸಿ

    ಉಪ ವಿಭಾಗಾಧಿಕಾರಿ ಸಿ.ಡಿ.ಗೀತಾ ಕಿವಿಮಾತು | ಕರೊನಾ ವೈರಸ್ ಬಗ್ಗೆ ಜಾಗೃತಿ ಕಾರ್ಯಕ್ರಮ


    ಕನಕಗಿರಿ: ಕರೊನಾ ವೈರಸ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಅದರ ಬದಲು ವೈಯಕ್ತಿಕ ಕಾಳಜಿ ಇರಲಿ ಎಂದು ಉಪ ವಿಭಾಗಾಧಿಕಾರಿ ಸಿ.ಡಿ.ಗೀತಾ ಹೇಳಿದರು.

    ಪಟ್ಟಣದ ಕನಕಾಚಲಪತಿ ದೇವಸ್ಥಾನದಲ್ಲಿ ಕರೊನಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರ ಈ ಬಗ್ಗೆ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದೆ. ಅದರ ಯತ್ನಕ್ಕೆ ಜನರೂ ಕೈಜೋಡಿಸಬೇಕು. ಕೈಗಳನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಸೀನುವಾಗ ಮತ್ತು ಕೆಮ್ಮುವಾಗ ಮುಖಗವಸು(ಮಾಸ್ಕ್) ಉಪಯೋಗಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು. ಉಸಿರಾಟದ ತೊಂದರೆಯಾದಲ್ಲಿ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಸಬೇಕು. ಈ ಕ್ರಮಗಳನ್ನು ಸಾರ್ವಜನಿಕರು ಅನುಸರಿಸುವದರಿಂದ ಕೊರೊನಾ ವೈಸರನ್ನು ಬರದಂತೆ ನೋಡಿಕೊಳ್ಳಬುಹುದು ಎಂದರು.

    ಸಮುದಾಯ ಆರೋಗ್ಯ ಕೇಂದ್ರ ಆಡಳಿತಾಧಿಕಾರಿ ರಾಘವೇಂದ್ರ ಮಾತನಾಡಿ, ನಮ್ಮ ಸಮುದಾಯ ಆರೋಗ್ಯ ಕೇಂದ್ರದಿಂದ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಕರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಬ್ಯಾನರ್‌ಗಳನ್ನು ಹಾಕಲಾಗಿದೆ. ಆರೋಗ್ಯ ಕೇಂದ್ರ ವ್ಯಾಪಿಗೆ ಬರುವ ಎಲ್ಲ ಗ್ರಾಮಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ತಹಶೀಲ್ದಾರ್ ರವಿ ಅಂಗಡಿ, ತಾಪಂ ಇಒ ಅರುಣ ಕುಮಾರ, ಪಿಎಸ್‌ಐ ಪ್ರಶಾಂತ, ದೇವಸ್ಥಾನ ಇಒ ವಿಶ್ವನಾಥ, ಪಪಂ ಮುಖ್ಯಾಧಿಕಾರಿ ತಿರುಮಲಾಂಬ, ದೇವಸ್ಥಾನ ಕಾರ್ಯದರ್ಶಿ ಸಿದ್ದಲಿಂಗಯ್ಯಸ್ವಾಮಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts