More

    ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿ

    ಕನಕಗಿರಿ: ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಸಂವಿಧಾನ ನೀಡಿರುವ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಹಸೀಲ್ದಾರ್ ಸಂಜಯ್ ಕಾಂಬ್ಳೆ ಹೇಳಿದರು.

    18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಅರ್ಹ

    ತಾಲೂಕು ಸ್ವೀಪ್ ಸಮಿತಿ ಹಾಗೂ ಪಪಂ ಸಹಯೋಗದಲ್ಲಿ ಮಂಗಳವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಅರ್ಹರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಂವಿಧಾನ ನೀಡಿದೆ.

    ಈ ಅಧಿಕಾರ ಬಳಸಿಕೊಂಡು ಚುನಾವಣೆಯಲ್ಲಿ ಬಯಸಿದ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದರು.

    ಇದನ್ನೂ ಓದಿ: ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕರಿಸಿ

    ತಾಪಂ ಇಒ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಕಂದಕೂರ ಮಾತನಾಡಿ, ಚುನಾವಣೆ ದಿನವಾದ ಮೇ 10ರಂದು ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ತಿಳಿಸಿದರು.

    ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಘೋಷಣೆಗಳನ್ನು ಕೂಗುತ್ತ ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಯಿತು. ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

    ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ತಾಪಂ ಯೋಜನಾಧಿಕಾರಿ ರಾಜಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts