More

    ಜನೌಷಧ ಕೇಂದ್ರ ಸದ್ಬಳಕೆ ಮಾಡಿಕೊಳ್ಳಿ, ಸಂಸದ ಸಂಗಣ್ಣ ಕರಡಿ ಮನವಿ

    ಕನಕಗಿರಿ: ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ ಜನೌಷಧ ಕೇಂದ್ರಗಳು ಬಡವರಿಗೆ ಕಡಿಮೆ ದರದಲ್ಲಿ ಔಷಧ ದೊರೆಯಲು ಸಹಕಾರಿಯಾಗಿವೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

    ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡಿರುವ ಜನೌಷಧ ಕೇಂದ್ರ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಮಾಜಿ ಕೇಂದ್ರ ಸಚಿವ ದಿ.ಅನಂತಕುಮಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿಯಿಂದ ದೇಶಾದಾದ್ಯಂತ ಜನೌಷಧ ಕೇಂದ್ರ ಜಾರಿಗೆ ತರಲಾಗಿದೆ. ಬಡವರ ಆರೋಗ್ಯ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಡಿಮೆ ದರಕ್ಕೆ ಔಷಧ ವಿತರಿಸಲು ಜನೌಷಧ ಕೇಂದ್ರ ತೆರೆಯಲಾಗುತ್ತಿದೆ ಎಂದರು.

    ಹ್ಯಾಟ್ರಿಕ್ ಪ್ರಧಾನಿಯಾಗುವುದು ನಿಶ್ಚಿತ

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನ ಇಂದಿರಾಗಾಂಧಿ ಮೂರು ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಅದರಂತೆ ಕರೊನಾವನ್ನು ಸಮರ್ಥವಾಗಿ ಎದುರಿಸುವ ಮೂಲಕ ಮೋದಿ ಜನಹಿತ ಸರ್ಕಾರ ನಡೆಸುತ್ತಿದ್ದಾರೆ. ಜನರ ಮೆಚ್ಚಿನ ಪ್ರಧಾನಿಯಾಗಿದ್ದು, ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

    ಕಾಡಾ ಮಾಜಿ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಪ್ರಮುಖರಾದ ಬಸವರಾಜ ಗುಗ್ಗಳಶೆಟ್ರ, ವಿರೂಪಾಕ್ಷಪ್ಪ ಭತ್ತದ, ಜಿ.ಶ್ರೀಧರ ಕೆಸರಹಟ್ಟಿ, ವಾಗೀಶ ಹಿರೇಮಠ, ಶಿವಾನಂದ ಬೆನಕನಾಳ, ಡಾ.ಸಹನಾ ಸಿದ್ರಾಮೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts