More

    ಬಡವರಿಗೆ ಆರೋಗ್ಯ ಶಿಬಿರಗಳು ಸಹಕಾರಿ: ವಿರಕ್ತಮಠದ ಡಾ. ಚನ್ನಮಲ್ಲ ಮಹಾಸ್ವಾಮೀಜಿ ಅಭಿಮತ

    ಕನಕಗಿರಿ: ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಆರೋಗ್ಯ ಶಿಬಿರಗಳು ಬಡವರಿಗೆ ಅನುಕೂಲವಾಗಿವೆ ಎಂದು ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಡಾ. ಚನ್ನಮಲ್ಲ ಮಹಾಸ್ವಾಮೀಜಿ ಹೇಳಿದರು.

    ಪಟ್ಟಣದ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳ ಜೀವನ ಶೈಲಿ, ಆಹಾರ ಪದ್ಧತಿಯಿಂದಾಗಿ ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಇಂತಹ ಕಾಯಿಲೆಗಳನ್ನು ಗುರುತಿಸಿ, ಚಿಕಿತ್ಸೆ ಪಡೆದುಕೊಳ್ಳಲು ಆಗದ ಬಡವರು ದೂರ ಉಳಿದು ಬಿಡುತ್ತಾರೆ. ಅಂತಹವರನ್ನು ಗುರುತಿಸಿ ಪರೀಕ್ಷೆಗೊಳಪಡಿಸಲು ಸಂಘ ಸಂಸ್ಥೆಗಳು ಆಗಾಗ್ಗೆ ಹಮ್ಮಿಕೊಳ್ಳುವ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ ಎಂದರು ತಿಳಿಸಿದರು.

    ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷ ಜಿ. ರಾಮಕೃಷ್ಣ ಮಾತನಾಡಿ, ಕಳೆದ 40 ವರ್ಷಗಳಿಂದ ಸಂಘವು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ನೆರೆ ಹಾವಳಿ, ಬಡವರು ಕಷ್ಟಗಳಿಗೆ ನೆರವಾಗುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದರು.

    ಸಿಡಿಪಿಒ ಶ್ವೇತಾ, ಹೇರೂರು ಗ್ರಾ.ಪಂ ಅಧ್ಯಕ್ಷ ಹನುಮೇಶಗೌಡ ಮಾತನಾಡಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಪಾಟೀಲ, ಮುಖಂಡ ಮಲ್ಕೇಶ ಕೋಟೆ, ವೀರೇಶ ಮಿಟ್ಲಕೋಡ್, ನಾಗೇಶ ಮಾಟೂರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts