More

    ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಕಾರಿ


    ಕನಕಗಿರಿ: ವಿದ್ಯಾರ್ಥಿಗಳ ಕಲಿಕಾ ಪ್ರಮಾಣ ಹೆಚ್ಚಿಸಲು ಪ್ರತಿಭಾ ಪುರಸ್ಕಾರ ಸಹಕಾರಿಯಾಗುತ್ತದೆ ಎಂದು ಮುಂಜಾವು ಮಹಿಳಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಲಯ ವ್ಯವಸ್ಥಾಪಕ ಹನುಮಂತರೆಡ್ಡಿ ಹುಲಿಹೈದರ ಹೇಳಿದರು.

    ಇದನ್ನೂ ಓದಿ: ಪ್ರತಿಭಾ ಪುರಸ್ಕಾರದ ಪೂರ್ವಭಾವಿ ಸಭೆ

    ಪಟ್ಟಣದ ಎಪಿಎಂಸಿ ಶ್ರಮಿಕ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ

    ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಅಳಿದುಳಿದ ವಿದ್ಯಾರ್ಥಿಗಳು ಓದುತ್ತಿದ್ದಾರೆ. ತಾಲೂಕಿನಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಅತಿಹೆಚ್ಚು ಅಂಕ ಪಡೆದಿದ್ದು, ಅಂತಹ ಮಕ್ಕಳನ್ನು ಗುರುತಿಸಿ, ಸೌಹಾರ್ದದಿಂದ ಪುರಸ್ಕರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಕಾರ್ಯಕ್ರಮ ಉದ್ಘಾಟಿಸಿದ ಕೆಪಿಎಸ್ ಕಾಲೇಜು ವಿಭಾಗದ ಪ್ರಭಾರಿ ಪ್ರಾಚಾರ್ಯ ಮಾರೆಪ್ಪ ಎನ್. ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು ಯಾವ ಕ್ಷೇತ್ರದಲ್ಲಿಯೂ ಕಮ್ಮಿ ಇಲ್ಲ. ಶಿಕ್ಷಣ ಕ್ಷೇತ್ರದಲ್ಲೂ ಅವರ ಸಾಧನೆ ಮಾದರಿ. ಈ ಪೈಕಿ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಸಹಕಾರಿ ಅಧ್ಯಕ್ಷೆ ಬಸಮ್ಮ ಮೆತಗಲ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಬಿಐ ಸ್ಥಳೀಯ ಶಾಖೆ ವ್ಯವಸ್ಥಾಪಕ ರಾಜೋಲಿ ರಾಮು, ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಸಿದ್ರಾಮಪ್ಪ ಚಳ್ಳೂರು, ವಾರ್ಡನ್ ತುಗ್ಲೆಪ್ಪ ದೇಸಾಯಿ, ಎಎಸ್‌ಐ ಜಾಫರುದ್ಧೀನ್, ಸಂಸ್ಥೆಯ ಸಹಾಯಕ ನಿರ್ದೇಶಕ ಎಂ.ಬಿ ಕುಕನೂರ್, ಸಿಬ್ಬಂದಿ ವಿಶ್ವನಾಥ ಮಹಿಪತಿ, ಚಂದಾಲಿಂಗಪ್ಪ, ಕವಿತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts