More

    ಶಾಲಾ ಕಾಲೇಜು ಸಮಯಕ್ಕೆ ಬಸ್ ಬಿಡಿ: ಕನಕಗಿರಿಯಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ


    ಕನಕಗಿರಿ: ಗ್ರಾಮೀಣ ಪ್ರದೇಶಗಳಿಂದ ತಾಲೂಕು ಕೇಂದ್ರದ ಶಾಲಾ ಕಾಲೇಜುಗಳಿಗೆ ಬಂದು ಹೋಗುವ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಪಂ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

    ಎಸ್‌ಎಫ್‌ಐ ತಾಲೂಕು ಕಾರ್ಯದರ್ಶಿ ಶಿವಕುಮಾರ ಮಾತನಾಡಿ, ಕನಕಗಿರಿ ಪಟ್ಟಣ ತಾಲೂಕು ಕೇಂದ್ರವಾದ ಬಳಿಕ ಗ್ರಾಮೀಣ ಪ್ರದೇಶಗಳಿಂದ ಸರಿಯಾದ ಬಸ್ ಸಂಪರ್ಕವಿಲ್ಲ. ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನು ಅವಲಂಬಿಸಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಕೆಲ ಗ್ರಾಮಗಳ ವಿದ್ಯಾರ್ಥಿಗಳಂತೂ ನಡೆದುಕೊಂಡು ಶಾಲೆಗೆ ಬರುವುದು ಸಾಮಾನ್ಯವಾಗಿದೆ. ಇದರಿಂದ ಅವರ ಶೈಕ್ಷಣಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಕಾಲಕ್ಕೆ ಬಸ್ ಬಿಡುವಂತೆ ಮನವಿ ಮಾಡಿಕೊಂಡರೂ ಸಾರಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹಲವು ವರ್ಷಗಳಿಂದ ಇರುವ ಈ ಸಮಸ್ಯೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಇಒ ಚಂದ್ರಶೇಖರ ಕಂದಕೂರು ಮಾತನಾಡಿ, ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆದು ಬಸ್ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸುವ ಭರವಸೆ ನೀಡಿದರು. ವಿದ್ಯಾರ್ಥಿಗಳಾದ ಶರಣಪ್ಪ, ರಾಜಾಹುಲಿ, ಶಿವರಾಜ್, ನಾಗರಾಜ, ತ್ರಿವೇಣಿ, ಸಂಗೀತ, ಸೌಜನ್ಯ, ಶ್ರೀದೇವಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts