ಕನಕಗಿರಿ: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಮಂಗಳವಾರ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಒಳ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು.
ಸಚಿವರ ಪುತ್ರ ಶಶಿ ಮೊದಲಿಗೆ ಶ್ರೀ ಕನಕಾಚಲ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೇಕ್ ಕತ್ತರಿಸಿದರು. ಬಳಿಕ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿ ಒಳ ರೋಗಿಗಳಿಗೆ ಹಣ್ಣು ವಿತರಿಸಿದರು.
ಪಪಂ ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯ ರಾಜಾಸಾಬ್ ನಂದಾಪುರ, ಪ್ರಮುಖರಾದ ಶರಣಪ್ಪ ಭತ್ತದ್, ಬಿಲಾಲ್, ಮುಕ್ತುಂಸಾಬ್, ಹನುಮೇಶ ವಾಲೇಕಾರ ಇತರರಿದ್ದರು.