More

    ಬಿಎಸ್‌ಪಿ, ಪಕ್ಷೇತರ ಪ್ರಚಾರಕ್ಕೆ ಅಡ್ಡಿ ಆರೋಪಿಗಳ ವಿಚಾರಣೆ ಮುಚ್ಚಳಿಕೆ ಪಡೆದ ಪೊಲೀಸರು

    ಕನಕಪುರ: ಚುನಾವಣಾ ಕಣದಲ್ಲಿರುವ ಪಕ್ಷೇತರ ಹಾಗೂ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆ ಇನ್‌ಸ್ಪೆಕ್ಟರ್ ಮಿಥುನ್ ಶಿಲ್ಪಿ ಆರೋಪಿಗಳನ್ನು ಶುಕ್ರವಾರ ವಿಚಾರಣೆಗೆ ಒಳಪಡಿಸಿದರು.

    ಪಕ್ಷೇತರ ಅಭ್ಯರ್ಥಿ ನಲ್ಲಹಳ್ಳಿ ಶ್ರೀನಿವಾಸ್ ಹಾಗೂ ಬಿಎಸ್‌ಪಿ ಅಭ್ಯರ್ಥಿ ಕೃಷ್ಣಪ್ಪ ಅವರು ಪ್ರಚಾರದಲ್ಲಿ ತೊಡಗಿದ್ದಾಗ ಅಡ್ಡ ಹಾಕಿದ ಕಿಡಿಗೇಡಿಗಳು ಪ್ರಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ ಬೆದರಿಕೆ ಸಹ ಹಾಕಿದ್ದಾರೆ. ಚುನಾವಣಾ ಆಯೋಗಕ್ಕೆ ಮೇ 3ರಂದು ಇಬ್ಬರು ಅಭ್ಯರ್ಥಿಗಳು ದೂರು ನೀಡಿದ್ದರು. ಚುನಾವಣಾ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸರಿಗೆ ತಿಳಿಸಿದ್ದರು.

    ಆರೋಪಿಗಳನ್ನು ಪತ್ತೆ ಹಚ್ಚಿ ಠಾಣೆಗೆ ಕರೆಸಿದ ಪೊಲೀಸರು ಇಬ್ಬರು ಅಭ್ಯರ್ಥಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿದರಲ್ಲದೆ, ದೂರುದಾರರು ಕ್ರಮಕ್ಕೆ ಒತ್ತಾಯಿಸಿದರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಇನ್ನೊಮ್ಮೆ ಈ ರೀತಿ ನಡೆದುಕೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿ ಆರೋಪಿಗಳಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

    ಬಿಎಸ್‌ಪಿ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಪ್ರಚಾರದ ವೇಳೆ ತೊಂದರೆ ಆದಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು, ಜತೆಗೆ ಯಾವುದೇ ಅಭ್ಯರ್ಥಿಗಳು ಮತಪ್ರಚಾರ ವೇಳೆ ಶಾಂತಿ ಕದಡುವುದು, ಗಲಭೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts