ಅಜ್ಜಾವರದಲ್ಲಿ ಕಂಡದ ಗೌಜಿ ಕೆಸರ್ದ ಪರ್ಬ

New Project (6)
Published on

ಸುಳ್ಯ: ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲ ವತಿಯಿಂದ 4ನೇ ವರ್ಷದ ‘ಕಂಡದ ಗೌಜಿ ಕೆಸರ್ದ ಪರ್ಬ’ ಅಜ್ಜಾವರ ಕೊರಂಗುಬೈಲು ಗದ್ದೆಯಲ್ಲಿ ನಡೆಯಿತು.

ಸುಳ್ಯದ ಎಒಎಲ್‌ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಉದ್ಘಾಟಿಸಿದರು. ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಅಜ್ಜಾವರ ಅಧ್ಯಕ್ಷತೆ ವಹಿಸಿದ್ದರು. ವಿಶ್ವೇಶ್ವರ ತಾಂತ್ರಿಕ ವಿ.ವಿ. ಮಂಗಳೂರು ವಿಸ್ತರಣಾ ಕೇಂದ್ರ ವಿಶೇಷಾಧಿಕಾರಿ ಡಾ.ದಾಮೋದರ ನಾರಾಲು, ಸಿ.ಎ ಬ್ಯಾಂಕ್ ಅಧ್ಯಕ್ಷ ವಿಕ್ರಮ್ ಎ.ವಿ., ದ.ಕ ಜೇನು ವ್ಯವಸಾಯ ಸಹಕಾರ ಸಂಘ ಅಧ್ಯಕ್ಷ ಚಂದ್ ಕೋಲ್ಚಾರ್, ಸಂಧ್ಯಾರಶ್ಮಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಚೆನ್ನಕೇಶವ ಜಾಲ್ಸೂರು, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ, ನಿವೃತ್ತ ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿ, ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸಂಕೇಶ್ ಫೌಂಡೇಷನ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಸಂಕೇಶ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ನಾಯ್ಕ, ಶಿಕ್ಷಕರಾದ ಗೋಪಿನಾಥ್ ಮೆತ್ತಡ್ಕ, ಸುದ್ದಿ ಸುಳ್ಯ ಹಬ್ಬ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಕೊಡೆಂಕಿರಿ, ಪತ್ರಕರ್ತ ಹರೀಶ್ ಬಂಟ್ವಾಳ್, ಲೀಲಾವತಿ ಬಾಲಕೃಷ್ಣ ನಾಯ್ಕ, ಭವ್ಯಾ ಭುವನ್ ಉಪಸ್ಥಿತರಿದ್ದರು. ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಅಜ್ಜಾವರ ಸ್ವಾಗತಿಸಿದರು. ನವೀನ್ ವಂದಿಸಿದರು. ಚೈತ್ರ ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ನಿರೂಪಿಸಿದರು.

ವಿವಿಧ ಸ್ಪರ್ಧೆಗಳು

ಸಂಧ್ಯಾರಶ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ನಿರ್ದೇಶಕ ಚೆನ್ನಕೇಶವ ಜಾಲ್ಸೂರು ಕೆಸರು ಗದ್ದೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net