More

    ನವೆಂಬರ್​ನಲ್ಲಿ ‘ಕಾಣೆಯಾಗಿದ್ದಾಳೆ’; ಸದ್ಯ ಹಾಡುಗಳ ಬಿಡುಗಡೆ

    ಬೆಂಗಳೂರು: ಕನ್ನಡದಲ್ಲಿ ವಿಭಿನ್ನ ಶೀರ್ಷಿಕೆಯ ಹಲವು ಚಿತ್ರಗಳು ಬಿಡುಗಡೆಯಾಗುತ್ತಿವೆ. ಆ ಸಾಲಿಗೆ ‘ಕಾಣೆಯಾಗಿದ್ದಾಳೆ – ಹುಡುಕಿ ಕೊಟ್ಟವರಿಗೆ ಬಹುಮಾನ’ ಸಹ ಒಂದು. ಕೌಶಿಕ್​ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಯಿತು.

    ಇದನ್ನೂ ಓದಿ: ಮುಕ್ತಾಯದ ಹಂತದಲ್ಲಿ ಪೃಥ್ವಿ-ಅಂಕಿತಾ ಹೊಸ ಫ್ಯಾಂಟಸಿ ಕಾಮಿಡಿ ಚಿತ್ರ

    ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಟಿ-ನಿರ್ದೇಶಕಿ ಪ್ರಿಯಾ ಹಾಸನ್, ನಟಿಯರಾದ ಶರಣ್ಯ, ನಿಶಿತಾ ಗೌಡ, ‘ಫಾರ್ ರಿಜಿಸ್ಟ್ರೇಶನ್’ ಚಿತ್ರದ ನಿರ್ದೇಶಕ ನವೀನ್ ದ್ವಾರಕನಾಥ್, ನಿರ್ಮಾಪಕ ನವೀನ್ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

    ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಆರ್​.ಕೆ ನಿರ್ದೇಶನ ಮಾಡಿದ್ದಾರೆ. ‘ನಾನು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದ ಜೊತೆ ಒಡನಾಟ ಹೊಂದಿದ್ದೇನೆ. ಇದು ನನ್ನ ಎರಡನೇ ನಿರ್ದೇಶನದ ಚಿತ್ರ. ಸಮಾಜಿಕ ಕಳಕಳಿಯಿರುವ ಈ ಚಿತ್ರವನ್ನು ಕುಟುಂಬ ಸಮೇತ ನೋಡಬಹುದು. ಹೆಚ್ಚಿನ ಓದಿನ ಸಲುವಾಗಿ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳು ಯಾವರೀತಿ ತೊಂದರೆ ಅನುಭವಿಸುತ್ತಾಳೆ ಎನ್ನುವುದೇ ಪ್ರಮುಖ ಕಥಾಹಂದರ. ವಿನಯ್ ಕಾರ್ತಿ ನಾಯಕನಾಗಿ ನಟಿಸಿದ್ದು, ಕೀರ್ತಿ ಭಟ್ ನಾಯಕಿಯಾಗಿ ನಟಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

    ನಾಯಕ ವಿನಯ್​ ಕಾರ್ತಿ ಮಾತನಾಡಿ, ‘ನಾನು ಹೊಸಕೋಟೆ ಬಳಿಯ ಹಳ್ಳಿಯವನು. ಬೆಂಗಳೂರಿಗೆ ಕೆಲಸದ ನಿಮಿತ್ತ ಬಂದೆ. ಆನಂತರ ನಿರ್ದೇಶಕ ಆರ್ ಕೆ ಅವರು ಭೇಟಿಯಾದಾಗ ಈ ಚಿತ್ರದ ಬಗ್ಗೆ ಹೇಳಿದರು. ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದರು’ ಎಂದರು.

    ಇದನ್ನೂ ಓದಿ: ನನ್ನ ಬಟ್ಟೆ ಹರಿಯಿತು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಕಹಿ ಘಟನೆ ವಿರುದ್ಧ ನಟಿ ಅನಸೂಯ ಆಕ್ರೋಶ

    ‘ಕಾಣೆಯಾಗಿದ್ದಾಳೆ’ ಚಿತ್ರದಲ್ಲಿ ಹಿರಿಯ ನಟಿ ಗಿರಿಜಾ ಲೋಕೇಶ್, ವಿನಯಾ‌ ಪ್ರಸಾದ್, ಬಿರಾದಾರ್ ಮುಂತಾದವರು ಚಿತ್ರದಲ್ಲಿದ್ದಾರೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರ ನೋಡಿ, ಪ್ರಮಾಣ ಪತ್ರ ನೀಡಿದೆ. ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರ ಚಿತ್ರ ಬಿಡುಗಡೆಯಾಗಲಿದೆ.

    ಭೂತಕೋಲವು ಹಿಂದು ಸಂಸ್ಕೃತಿಗೆ ಸೇರುತ್ತದೆ ಎಂಬ ರಿಷಬ್ ಶೆಟ್ಟಿ ಹೇಳಿಕೆ ನಿಜವಲ್ಲ: ನಟ ಚೇತನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts