ಕುಸ್ತಿಯಲ್ಲಿ ಫೈನಲ್‌ಗೆ ಎಂಟ್ರಿಯಾದ ವಿನೇಶ್ ಪೋಗಟ್; ವ್ಯಂಗ್ಯವಾಗಿ ಅಭಿನಂದಿಸಿದ ಕಂಗನಾ ರಣಾವತ್

ಮುಂಬೈ: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ವಿನೇಶ್ ಪೋಗಾಟ್​ ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್​​ನಲ್ಲಿ ಕ್ಯೂಬಾದ ಕುಸ್ತಿಪಟು ಯಸ್ನೆಲಿಸ್​ ಗುಜ್ಮನ್ ಸೋಲಿಸಿ ಫೈನಲ್ ಪ್ರವೇಶ ಮಾಡಿದ್ದಾರೆ. ಫೈನಲ್ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎನಿಸಿಕೊಂಡಿದ್ದಾರೆ. ವಿನೇಶ್ ಫೋಗಟ್ ಫೈನಲ್ ಪ್ರವೇಶದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಸಂಸದೆ ಕಂಗನಾ ರಣಾವತ್ ವ್ಯಂಗ್ಯವಾಡಿದ್ದಾರೆ. ಈ ಕುರಿತಾಗಿ ನೆಟ್ಟಿಗರು ನಟಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಂಗನಾ ರಣಾವತ್ ಎಲ್ಲವನ್ನೂ ಮುಕ್ತವಾಗಿ ಮಾತನಾಡುತ್ತಾರೆ. ಇಲ್ಲಿಯೂ ಸಹ, ಅಭಿನಂದನೆಗಳ ಜೊತೆಗೆ, ವಿನೇಶ್ ಫೋಗಟ್ ಅವರು ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದ ಸಮಯವನ್ನು ನೆನಪಿಸಿದ್ದಾರೆ .

ಸಂಸದೆ ಕಂಗನಾ ರಣಾವತ್, ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾವಹಿಸಿದ್ದರು. ಈ ವೇಳೆ ಅವರು ಮೋದಿ ನಿಮ್ಮ ಸಮಾಧಿಯನ್ನೂ ಅಗೆಯುತ್ತಾರೆ ಎಂದು ಹೇಳಿದ್ದರು. ಅದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿತು. ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ ಎಂದು ಬೆರೆದುಕೊಂಡಿದ್ದಾರೆ.

ಫೋಗಾಟ್ ಸಾಧನೆ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗ್ತಿದೆ. ಕಂಗನಾ ಅವರ ಟ್ವೀಟ್​​ ಕುರಿತಾಗಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

29 ವರ್ಷದ ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಶರಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಇದರ ವಿರುದ್ಧ ದೇಶದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ವಿನೇಶ್ ಫೋಗಟ್ ದೀರ್ಘಕಾಲದವರೆಗೆ ಕುಸ್ತಿಯಿಂದ ದೂರ ಉಳಿದಿದ್ದರು. ವಿನೇಶ್ ಫೋಗಟ್ ಒಲಿಂಪಿಕ್ಸ್​​ಗೆ ಪ್ರವೇಶಿಸಿದ ಕೂಡಲೇ ಸಂಚಲನ ಮೂಡಿಸಿದ್ದಾರೆ.

Share This Article

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…