ಮೊದಲ ಹೆಜ್ಜೆಯಲ್ಲೇ ಗೆಲುವಿನ ಸಂತಸ, ಮುನ್ನಡೆಯ ಬೆನ್ನಲ್ಲೇ ತಾಯಿ ಆರ್ಶಿವಾದ ಪಡೆದ ಕಂಗನಾ ರಣಾವತ್​!

Untitled design (45)
Published on

ಹಿಮಾಚಲ ಪ್ರದೇಶ: ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಿದ ಚಿತ್ರನಟಿ, ರಾಜಕಾರಣಿ ಕಂಗನಾ ರಣಾವತ್​ ಇಂದಿನ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 30,000ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಈ ಬೆನ್ನಲ್ಲೇ ದೇವಾಲಯಕ್ಕೆ ತೆರಳಿ, ತಮ್ಮ ತಾಯಿಯ ಆಶಿರ್ವಾದ ಪಡೆದಿದ್ದಾರೆ.

ಆರಂಭಿಕ ಹಂತದಲ್ಲಿ ಕಂಗನಾ ರಣಾವತ್​ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಚೊಚ್ಚಲ ಪ್ರವೇಶದಲ್ಲೇ ಮಿಂಚುತ್ತಿರುವ ಬಾಲಿವುಡ್ ತಾರೆ, ಇದುವರೆಗೆ 2,25,654* ಮತಗಳನ್ನು ಪಡೆದು ಮುನ್ನುಗ್ಗುತ್ತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಸಿಂಗ್ 1,94,562* ಮತಗಳಿಂದ ಹಿಂದುಳಿದಿದ್ದಾರೆ.

ಪ್ರಸ್ತುತ ದೇಶದಲ್ಲಿ ಎನ್​ಡಿಎ ಮುನ್ನಡೆ ಪಡೆದುಕೊಂಡಿದ್ದು, ಗೆಲುವಿನ ಕೇಕೆ ಹಾಕಲು ಸಿದ್ಧವಾಗಿದೆ. ಇನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನದಲ್ಲಿ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net