ಇಂದಿರಾ ಗಾಂಧಿಯಾಗಲಿದ್ದಾರೆ ಕಂಗನಾ ರಣಾವತ್​! ಈ ಬಗ್ಗೆ ಆಕೆ ಹೇಳಿದ್ದೇನು ಗೊತ್ತಾ?

kangana
Published on

ಮುಂಬೈ: ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲೇ ಇರುವ ಬಾಲಿವುಡ್​ ನಟಿ ಕಂಗನಾ ರಣಾವತ್​ ಇದೀಗ ಮತ್ತೊಂದು ಸುದ್ದಿಯೊಂದಿಗೆ ಹೊರಬಂದಿದ್ದಾರೆ. ಭಾರತದ ಮಾಜಿ ಪ್ರಧಾನಿ, ಕಾಂಗ್ರೆಸ್​ ನಾಯಕಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಂಗನಾ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನೂ ಹೆಸರಿಡದ ಚಿತ್ರದಲ್ಲಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ. ದೇಶದ ಅತ್ಯಂತ ಪ್ರಭಾವಿ ರಾಜಕಾರಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಉತ್ಸುಕರಾಗಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅಂದ ಹಾಗೆ ಈ ಚಿತ್ರ ಒಂದು ಪುಸ್ತಕವನ್ನು ಆಧರಿಸಿದ್ದಾಗಿರಲಿದೆಯಂತೆ. ಯಾವ ಪುಸ್ತಕ ಎನ್ನುವುದರ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇರಲಿದೆ ಎನ್ನುವುದು ಸದ್ಯದ ಮಾಹಿತಿ.

ಈ ಹಿಂದೆ ಕಂಗನಾ ಜತೆ ರಿವಾಲ್ವರ್​ ರಾಣಿ ಚಿತ್ರದಲ್ಲಿ ಕೆಲಸ ಮಾಡಿದ್ದ ನಿರ್ದೇಶಕ ಸಾಯಿ ಕಬೀರ್​ ಈ ಚಿತ್ರದ ಕಥೆ ಮತ್ತು ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಸ್ಕ್ರಿಪ್ಟ್​ ರೆಡಿ ಆಗಿದ್ದು, ಮುಹೂರ್ತ ಮಾಡಿ, ಚಿತ್ರೀಕರಣ ಆರಂಭಿಸುವುದು ಬಾಕಿಯಿದೆ. ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಮೊರಾರ್ಜಿ ದೇಸಾಯಿ, ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇತರ ಪ್ರಮುಖ ವ್ಯಕ್ತಿಗಳ ಪಾತ್ರ ಸಿನಿಮಾದಲ್ಲಿರಲಿದೆ. ಯಾವ ನಟರು ಯಾವ ಪಾತ್ರವನ್ನು ನಿಭಾಯಿಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net