More

    ಕನಿಷ್ಠ 21 ಸಾವಿರ ರೂ. ವೇತನ ನಿಗದಿಗೆ ಗ್ರಾಮ ಪಂಚಾಯಿತಿ ನೌಕರರ ಪಟ್ಟು

    ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ನಗರದ ಮಿನಿ ವಿಧಾನಸೌಧದ ಬಳಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

    ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಕೆ.ಎಸ್.ರಾಜಶೇಖರ್, ಸರ್ಕಾರಿ ನೌಕರರಂತೆ ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಮತ್ತು ಪ್ರತಿ ತಿಂಗಳು ಸರ್ಕಾರದ ಕನಿಷ್ಠ ವೇತನ ನೀಡಬೇಕು. ಅಲ್ಲಿಯವರೆಗೂ ಬಿಪಿಎಲ್ ಪಡಿತರ ಚೀಟಿಗೆ ಅವಕಾಶ ಕಲ್ಪಿಸಬೇಕು.

    ಕಾರ್ಯದರ್ಶಿಗಳ ವರದಿ ಯಂತೆ ನೌಕರರನ್ನು ಏಕಕಾಲದಲ್ಲಿ ಅನುಮೋದನೆ ನೀಡಬೇಕು, ಕನಿಷ್ಠ 21 ಸಾವಿರ ರೂ. ವೇತನ ನಿಗದಿಪಡಿಸಬೇಕು. ಗ್ರಾಮ ಪಂಚಾಯಿತಿ ನಿವೃತ್ತ ನೌಕರರಿಗೆ ಮಾಸಿಕ 10 ಸಾವಿರ ರೂ. ಪಿಂಚಣಿ ನೀಡಬೇಕು. ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಮೂಲಕ ಮನವಿ ಸರ್ಕಾರಕ್ಕೆ ಮನಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.
    ಗ್ರಾಪಂ ನೌಕರರಿಗೆ ಕೆಲಸದ ಒತ್ತಡ ಜಾಸ್ತಿ ಇರುವುದರಿಂದ ಪ್ರತಿ ಗ್ರಾಪಂನಲ್ಲಿ ಇಬ್ಬರು ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಅನುಮೋದನೆ ನೀಡಬೇಕು. ಎಲ್ಲ ನೌಕರರಿಗೂ ನಿವೃತ್ತಿ ಉಪದಾನ ನೀಡಬೇಕು ಹಾಗೂ ಸೇವಾ ಪುಸ್ತಕ ತೆರೆಯಬೇಕು. ಸಿಬ್ಬಂದಿ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ರಕ್ಷಣೆ ನೀಡಬೇಕು. ನೌಕರರಿಗೆ ಪ್ರತಿವರ್ಷ ಸಮವಸ್ತ್ರ ಮತ್ತು ಸೈಕಲ್ ಹಾಗೂ ಬ್ಯಾಟರಿ ನೀಡಬೇಕು. ಸೇವೆ ಆಧಾರದ ಮೇಲೆ ಸಂಬಳ ನಿಗದಿ ಮಾಡಬೇಕೆಂಬ ಇಪ್ಪತ್ತಕ್ಕೂ ಹೆಚ್ಚು ಬೇಡಿಕೆಗಳ ಹಕ್ಕೊತ್ತಾಯವನ್ನು ಸರ್ಕಾರಕ್ಕೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

    ಗ್ರಾಪಂ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಗಳಾದ ಪ್ರದೀಪ್, ರೇಣುಕಯ್ಯ, ನಾಗಮ್ಮ, ನಾಗಮಣಿ, ಕುಮಾರ್, ಸಿದ್ದರಾಜು, ಗಿರೀಶ್, ರಾಮನಗರ ತಾಲೂಕಿನ 20 ಗ್ರಾಪಂಗಳ ನೀರುಗಂಟಿಗಳು, ಕಸ ವಸೂಲಿಗಾರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts