ಮಾಲೀಕರ ಚಿನ್ನಾಭರಣಕ್ಕೆ ಕನ್ನ, ಪ್ರೇಯಸಿಗೆ ದಾನ

ಬೆಂಗಳೂರು: ಕೆಲಸ ಮಾಡುವ ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಅದನ್ನು ಪ್ರೇಯಸಿಗೆ ನೀಡಿದ್ದ ವಿವಾಹಿತನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿದ್ದಾಪುರ ನಿವಾಸಿ ನಾರಾಯಣಸ್ವಾಮಿ(೩೩) ಮತ್ತು ಆತನ ಪ್ರೇಯಸಿ ಚೆನ್ನೈ ಮೂಲದ ನವೀನಾ(೩೯) ಬಂಧಿತರು. ಆರೋಪಿಗಳಿಂದ ೨೦.೭೪ ಲಕ್ಷ ರೂ. ಮೌಲ್ಯದ ೩೩೩ ಗ್ರಾಂ ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಲಕ್ಕಸಂದ್ರ ನಿವಾಸಿ ಸೈಯದ್ ರೆಹಮಾನ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೈಯದ್ ರೆಹಮಾನ್ ಐಟಿ ಉದ್ಯೋಗಿಯಾಗಿದ್ದು, ಕುಟುಂಬ ಜತೆಗೆ ಲಕ್ಕಸಂದ್ರದ ಮನೆಯಲ್ಲಿ ನೆಲೆಸಿದ್ದರ. ಇವರ ಮನೆಯಲ್ಲಿ ಕಳೆದ ೨೦ ವರ್ಷಗಳಿಂದ ಆರೋಪಿ ನಾರಾಯಣಸ್ವಾಮಿಯ ತಾಯಿ ಬೆಳ್ಳಿಯಮ್ಮ ಮನೆಗೆಲಸ ಮಾಡುತ್ತಿದ್ದರು. ಹೆಚ್ಚಿನ ಕೆಲಸ ಇದ್ದಾಗ ನಾರಾಯಣ ಸ್ವಾಮಿ ಸಹ ತಾಯಿ ಜತೆಗೆ ಬಂದು ಕೆಲಸ ಮಾಡುತ್ತಿದ್ದ. ಈ ನಡುವೆ ರೆಹಮಾನ್‌ಗೆ ದುಬೈನಲ್ಲಿ ಕೆಲಸ ಸಿಕ್ಕ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಕುಟುಂಬ ಸಹಿತ ದುಬೈನಲ್ಲಿ ನೆಲೆಸಿದ್ದಾರೆ. ದುಬೈಗೆ ತೆರಳುವ ಮುನ್ನ ಚಿನ್ನಾಭರಣಗಳನ್ನು ಬ್ಯಾಗ್‌ನಲ್ಲಿ ಬೀರುವಿನಲ್ಲಿ ಇರಿಸಿದ್ದರು. ಮನೆಗೆ ಬೀಗ ಹಾಕಿಕೊಂಡು ಬೀಗ ಕೀ ಅನ್ನು ಸಂಬಂಧಿಕರಿಗೆ ನೀಡಿದ್ದರು. ತಿಂಗಳಿಗೊಮ್ಮೆ ಬೀಗ ಕೀ ಕೊಟ್ಟು ಪಡೆದು ಮನೆ ಸ್ವಚ್ಛಗೊಳಿಸಲು ನಾರಾಯಣಸ್ವಾಮಿಗೆ ಸೂಚಿಸಿದ್ದರು.
ಮನೆ ಸ್ವಚ್ಛಗೊಳಿಸುವ ವೇಳೆ ಕಳ್ಳತನ:
ನಾರಾಯಣಸ್ವಾಮಿ ತಿಂಗಳಿಗೊಮ್ಮೆ ಮನೆಗೆ ಬಂದು ಬೀಗದ ಕೀ ಪಡೆದು ಮನೆ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ದುಬೈನಿಂದ ನಗರಕ್ಕೆ ಬಂದಿದ್ದ ರೆಹಮಾನ್ ಮನೆಯ ಬೀರು ತೆರೆದು ನೋಡಿದಾಗ ಚಿನ್ನಾಭರಣಗಳು ಕಡಿಮೆ ಇರುವುದು ಕಂಡು ಬಂದಿದೆ. ಈ ವೇಳೆ ಮನೆಗೆಲಸದ ನಾರಾಯಣಸ್ವಾಮಿ ಮೇಲೆ ಅನುಮಾನ ವ್ಯಕ್ತಪಡಿಸಿ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿ ನಾರಾಯಣಸ್ವಾಮಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಮಾಲೀಕರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ತಾನೇ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈತ ನೀಡಿದ ಮಾಹಿತಿ ಮೇರೆಗೆ ಪ್ರೇಯಸಿ ನವೀನಾಳನ್ನು ಚೆನ್ನೈನ ರಾಜೇಶ್ವರಿನಗರದಲ್ಲಿ ಬಂಧಿಸಿ, ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕದ್ದ ಚಿನ್ನಾಭರಣ ಪ್ರೇಯಸಿಗೆ ನೀಡಿದ್ದ:
ನಾರಾಯಣಸ್ವಾಮಿಗೆ ವಿವಾಹವಾಗಿದ್ದು, ಪತ್ನಿ ಪಾರ್ಶ್ವವಾಯುಪೀಡಿತರಾಗಿ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಆಕೆಯನ್ನು ಚೆನ್ನೈನ ತವರು ಮನೆಯಲ್ಲಿ ಇರಿಸಿದ್ದ. ಪೇಂಟಿಂಗ್ ಕೆಲಸ ಮಾಡುವ ನಾರಾಯಣಸ್ವಾಮಿ ಸಿದ್ದಾಪುರದಲ್ಲಿ ತಾಯಿ ಜತೆಗೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಈ ನಡುವೆ ಡೇಟಿಂಗ್ ಆ್ಯಪ್‌ವೊಂದರಲ್ಲಿ ಚೆನ್ನೈ ಮೂಲದ ನವೀನಾ ಎಂಬಾಕೆ ಪರಿಚಯವಾಗಿ ಇಬ್ಬರು ಆತ್ಮೀರಾಗಿದ್ದರು. ಈ ನವೀನಾಳಿಗೆ ಪತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಇದ್ದಾರೆ. ಮಕ್ಕಳನ್ನು ಬೆಂಗಳೂರಿನ ಶಾಲೆವೊಂದರಲ್ಲಿ ಓದಿಸುತ್ತಿರುವ ನವೀನಾ ಆಗಾಗ ಚೆನ್ನೈನಿಂದ ನಗರಕ್ಕೆ ಬಂದು ಮಕ್ಕಳನ್ನು ನೋಡಿಕೊಂಡು ವಾಪಾಸ್ ಹೋಗುತ್ತಿದ್ದಳು. ಮಾಲೀಕರ ಮನೆಯಲ್ಲಿ ಚಿನ್ನಾಭರಣ ಇರುವ ವಿಚಾರವನ್ನು ನಾರಾಯಣಸ್ವಾಮಿ ತನ್ನ ಪ್ರೇಯಿಸಿಗೆ ಹೇಳಿದ್ದ. ಅದರಂತೆ ಆಕೆ ಕಳ್ಳತನ ಮಾಡಿದ ಜೀವನದಲ್ಲಿ ಸೆಟಲ್ ಆಗಬಹುದು ಎಂದು ಪುಸಲಾಯಿಸಿದ್ದಳು. ಆಕೆಯ ಸೂಚನೆಯಂತೆ ನಾರಾಯಣಸ್ವಾಮಿ ಮನೆ ಸ್ವಚ್ಛತೆಗೆ ಬಂದಾಗ ಒಂದೊಂದೇ ಚಿನ್ನಾಭರಣ ಕಳವು ಮಾಡಿ ನವೀನಾಳಿಗೆ ನೀಡಿದ್ದ. ಆಕೆ ಚಿನ್ನಾಭರಣಗಳನ್ನು ತಾನು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ನ ಮಾಲೀಕರು ಹಾಗೂ ಸಂಬಂಧಿಕರು, ಫೈನಾನ್ಸ್ ಕಂಪನಿಗಳಲ್ಲಿ ಗಿರವಿ ಇರಿಸಿ ಹಣ ಪಡೆದಿದ್ದಳು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…