ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ಅವರ ಪುತ್ರ ಗಿರಿ ದಿನೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Conviction: ಕೊಲೆ ಯತ್ನ ಮಾಡಿದವನಿಗೆ 10 ವರ್ಷ ಕಠಿಣ Punishment
ಚಿತ್ರನಟ ದರ್ಶನ್ ಅವರ ‘ನವಗ್ರಹ’ ಚಿತ್ರದಲ್ಲಿ ಅಭಿನಯಿಸಿದ್ದ ಗಿರಿ ದಿನೇಶ್ (45), ಫೆ.07ರ ಸಂಜೆ ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಮನೆಯಲ್ಲಿದ್ದ ವೇಳೆ ಹೃದಯಘಾತವಾಗಿದೆ. ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವಗ್ರಹ, ಚಮಕಾಯಿಸಿ ಚಿಂದಿ ಉಡಾಯ್ಸಿ ಸೇರಿದಂತೆ ಒಟ್ಟು 4 ಚಿತ್ರಗಳಲ್ಲಿ ನಟಿಸಿದ್ದ ಗಿರಿ ದಿನೇಶ್, ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಆದರೆ, ನಿನ್ನೆ ಮನೆಯಲ್ಲಿ ಪೂಜೆ ಮಾಡುವಾಗ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅವರನ್ನು ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೇ ಆದರೂ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಗಿರಿ ಅವರ ಸಾವಿನ ಸುದ್ದಿಗೆ ಕನ್ನಡ ಚಿತ್ರರಂಗದ ಕಲಾವಿದರು ಕಂಬನಿ ಮಿಡಿದಿದ್ದಾರೆ.