ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದೆ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಟ ಅನಂತ್ ನಾಗ್ ಮತ್ತು ಶಂಕರ್ ನಾಗ್ ಜೊತೆ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಮನ್ದೀಪ್ ರಾಯ್ ಅವರು ಡಾ.ರಾಜ್ಕುಮಾರ್ ಸೇರಿದಂತೆ ಸಿನಿ ದಿಗ್ಗಜರ ಜೊತೆ ನಟಿಸಿದ್ದಾರೆ. ಮಿಂಚಿನ ಓಟ, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತರಕ್ಷಕ, ಆಂಟಿ ಪ್ರೀತ್ಸೆ, ಪ್ರೀತ್ಸೋದ್ ತಪ್ಪಾ?… ಹೀಗೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ
ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್ಐಆರ್ ದಾಖಲು