More

    ಹಂಪಿ ಉತ್ಸವದಲ್ಲಿ ‘ ಶೇಕ್ ಇಟ್ ಪುಷ್ಪಾವತಿ’ ಬೆಡಗಿ ನಿಮಿಕಾ ರತ್ನಾಕರ್ ಡಾನ್ಸ್

    ಬೆಂಗಳೂರು: ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ.ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಈ ಉತ್ಸವದಲ್ಲಿ ಸ್ಯಾಂಡಲ್​ವುಡ್​​ ನಟಿ ಹೆಜ್ಜೆ ಹಾಕುತ್ತಿದ್ದಾರೆ.

    ಹಂಪಿ ಉತ್ಸವದಲ್ಲಿ ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ ‘ಶೇಕ್ ಇಟ್ ಪುಷ್ಪವತಿ’ ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಶೇಕ್ ಇಟ್ ಪುಷ್ಪವತಿ ಎಂಬ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಪ್ರಸಿದ್ಧಿ ಪಡೆದುಕೊಂಡಿರುವವರು ನಿಮಿಕಾ ರತ್ನಾಕರ್. ಈಕೆ ಹಂಪಿ ಉತ್ಸವದಲ್ಲಿ ಭಾಗಿಯಾಗಿ ನೃತ್ಯ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ನಿಮಿಕ.

    ಈಗಾಗಲೇ ಅವರು ರಾಜ್ಯದ ನಾನಾ ಪ್ರದೇಶಗಳಲ್ಲಿ ಈ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದೀಗ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ. ಯಾಕೆಂದರೆ, ಉತ್ತರ ಕರ್ನಾಟಕ ಮಂದಿಯ ಪ್ರೀತಿ, ಅಭಿಮಾನ ಪಡೆದುಕೊಂಡಿರುವ ಅವರಿಗೆ, ಅಭಿಮಾನಿಗಳ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಸುಯೋಗ ಕೂಡಿ ಬಂದಿದೆ. ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಶೇಕ್ ಇಟ್ ಪುಷ್ಪವತಿ ಎಂಬ ಹಾಡು ನಿಮಿಕಾಗೆ ಒಂದಿಡೀ ಕರ್ನಾಟಕಕ್ಕೆ ಪ್ರದಕ್ಷಿಣೆ ಹಾಕುವ ಅವಕಾಶ ಕಲ್ಪಿಸುತ್ತಿದೆ.

    ಬಟ್ಟೆ ತೊಡಲು ಕೂಡ ಸಾಧ್ಯವಾಗಲ್ಲ, ಅಷ್ಟು ನೋವು..ಖ್ಯಾತ ನಟಿಗೆ ವಿಚಿತ್ರ ಕಾಯಿಲೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts