ಹಿರಿಯ ಪೋಷಕ ನಟಿ ಬಿ.ಜಯಾ ಇನ್ನಿಲ್ಲ! ಕಣ್ಣೀರ ಕಡಲಲ್ಲಿ ಚಿತ್ರರಂಗ

ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಗುರುವಾರದಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ಕಾಣಿಸಿಕೊಂಡಿದ್ದ ನಟಿಯ ಸಾವಿಗೆ ಚಿತ್ರರಂಗವೇ ಕಣ್ಣೀರು ಸುರಿಸತೊಡಗಿದೆ. ಎತ್ತರದಲ್ಲಿ ಕೊಂಚ ಕುಳ್ಳಗಿದ್ದ ಜಯಾ ಅವರು ಕುಳ್ಳಿ ಜಯಾ ಎಂದೇ ಜನಪ್ರಿಯರಾಗಿದ್ದರು. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದರು. ಹಾಸ್ಯಮಯ ಪಾತ್ರಗಳಲ್ಲೂ ಕಾಣಿಸಿಕೊಂಡು ಅಭಿಮಾನಿಗಳ ಮೊಗದಲ್ಲಿ ನಗು ಮೂಡಿಸಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. 1944ರಲ್ಲಿ … Continue reading ಹಿರಿಯ ಪೋಷಕ ನಟಿ ಬಿ.ಜಯಾ ಇನ್ನಿಲ್ಲ! ಕಣ್ಣೀರ ಕಡಲಲ್ಲಿ ಚಿತ್ರರಂಗ