More

    ಕನ್ನಡದ ಸಾಂಸ್ಕೃತಿಕ ರಾಯಭಾರಿ ಡಾ.ರಾಜ್

    ದೇವದುರ್ಗ: ಕನ್ನಡದ ಮೇರುನಟ ಡಾ.ರಾಜ್‌ಕುಮಾರ್ ಅವರಂತೆ ಸಿನಿಮಾಗಳು ಕೂಡ ದಂತಕತೆಯಾಗಿದ್ದು, ಪ್ರತಿಯೊಬ್ಬರ ಬದುಕಿಗೆ ಮಾದರಿ ಹಾಗೂ ಆದರ್ಶ ಪ್ರಾಯವಾಗಿವೆ ಎಂದು ಹಗಲುವೇಷ ಸಾಂಸ್ಕೃತಿಕ ವೇದಿಕೆ ಗೌರವಾಧ್ಯಕ್ಷ ಶಿವರಾಜ ರುದ್ರಾಕ್ಷಿ ಹೇಳಿದರು.

    ಪಟ್ಟಣದ ಶಾಂತಿನಗರದಲ್ಲಿ ಹಗಲುವೇಷ ಸಾಂಸ್ಕೃತಿಕ ವೇದಿಕೆಯಿಂದ ಆಯೋಜಿಸಿದ್ದ ಡಾ.ರಾಜ್‌ಕುಮಾರ್ ಅವರ 94ನೇ ಜಯಂತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ರಾಜ್‌ಕುಮಾರ್ ಕನ್ನಡ ಚಲನಚಿತ್ರರಂಗದ ಅದ್ಭುತ ನಟ. ಕನ್ನಡ ನಾಡು, ನುಡಿಗಾಗಿ ಶ್ರಮಿಸಿದ್ದಾರೆ. ಸಿನಿಮಾಗಳ ಮೂಲಕ ಸಾಮಾಜಿಕ ಸಂದೇಶ ನೀಡಿದ್ದು, ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ ಆಗಿದ್ದಾರೆ ಎಂದರು.

    ಎಂಆರ್‌ಎಸ್‌ಎಚ್ ತಾಲೂಕು ಅಧ್ಯಕ್ಷ ಹನುಮಂತಪ್ಪ ಮನ್ನಾಪುರ ಮಾತನಾಡಿ, ರಾಜಕುಮಾರ್ ಸಾಮಾಜಿಕ, ಭಕ್ತಿ ಪ್ರಧಾನ, ಪೌರಾಣಿಕ ಹಾಗೂ ಐತಿಹಾಸಿಕ ಚಲನಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳಲ್ಲಿ ನಟಿಸಿ ಕನ್ನಡಿಗರ ಹೃದಯದಲ್ಲಿ ಅಮರರಾಗಿದ್ದಾರೆ ಎಂದರು. ಕಸಾಪ ತಾಲೂಕು ಘಟಕದ ಮಾಜಿ ಅಧ್ಯಕ್ಷ ಎಚ್.ಶಿವರಾಜ್, ಹಗಲುವೇಷ ಕಲಾವಿದರಾದ ರವಿಚಂದ್ರ, ಶೇಖರಪ್ಪ, ಚಂದ್ರು, ಸಿದ್ದಲಿಂಗ, ಆಂಜನೇಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts