ಸಮಾನತೆ ಸಾರಿದ ಕನ್ನಡದ ಸಾಂಸ್ಕೃತಿಕ ನಾಯಕ

hbr-4
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಶ್ರೇಣೀಕೃತ ಅಸಮಾನತೆಯನ್ನು ಶಾಸನವಾಗಿಸಿ, ಪಟ್ಟಬದ್ಧ ಹಿತಾಸಕ್ತಿಗಳ ವಿರುದ್ಧವಾಗಿ ಶರಣರ ಅನುಭವ ಮಂಟಪದ ಮೂಲಕ ಸಮಾನತೆ ಸಾರಿದ ಕನ್ನಡದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಹೇಳಿದರು.

ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಸಾಂಸ್ಕೃತಿಕ ವೇದಿಕೆ ಜಂಟಿಯಾಗಿ ಬುಧವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಐಕ್ಯುಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ., ವಾಣಿಜ್ಯ ವಿಭಾಗದ ಆಶಾ ಎಚ್.ಬಿ., ಇಂಗ್ಲಿಷ್ ವಿಭಾಗದ ನಿಶ್ಚಿತಾ ಎಸ್.ಹೋಬಳಿದಾರ್, ವಿದ್ಯಾರ್ಥಿ ನಾಯಕಿ ವಿನುತಾ ಉಪಸ್ಥಿತರಿದ್ದರು. ಕನ್ನಡ ವಿಭಾಗ ಮುಖ್ಯಸ್ಥೆ ಡಾ.ಸೌಮ್ಯಲತಾ ಪಿ. ಸ್ವಾಗತಿಸಿದರು, ವೈಷ್ಣವಿ ಪ್ರಾರ್ಥಿಸಿದರು. ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಮೀನಾಕ್ಷಿ ನಾಯ್ಕ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net