More

    ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ 90 ನ್ಯಾಯಾಧೀಶರು ಸೇರಿ 120 ಮಂದಿಗೆ ‘ಕನ್ನಡ ಪ್ರಶಸ್ತಿ’

    ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ 2019-20, 2020-21ನೇ ಸಾಲಿನ ನ್ಯಾಯಾಂಗದಲ್ಲಿ ‘ಕನ್ನಡ ಪ್ರಶಸ್ತಿ’ ಪ್ರಕಟಿಸಲಾಗಿದ್ದು, 90 ನ್ಯಾಯಾಧೀಶರು ಸೇರಿ 120 ಮಂದಿ ಪ್ರಶಸ್ತಿಗೆ ಭಾಜನರಾಗಲಿದ್ದಾರೆ.

    ಕನ್ನಡದಲ್ಲಿ ತೀರ್ಪು ನೀಡುವ ನ್ಯಾಯಾಧೀಶರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಭಾಷೆಯಲ್ಲಿ ತೀರ್ಪು ನೀಡಿದ ನ್ಯಾಯಾಧೀಶರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಮಿತಿ ಆಯ್ಕೆ ಮಾಡಿದ್ದು, ಪ್ರಶಸ್ತಿ ತಲಾ 10 ಸಾವಿರ ನಗದು ಒಳಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ತಿಳಿಸಿದ್ದಾರೆ.

    ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ಅರ್ಜಿ ಸಲ್ಲಿಸುವ, ವಾದ ಮಂಡಿಸುವ ವಕೀಲರನ್ನು ಅಭಿಯೋಜನಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮೂಲಕ ಗೌರವಿಸಲಾಗುತ್ತಿದೆ. 2019- 20, 2020- 21ನೇ ಸಾಲಿನಲ್ಲಿ ಕನ್ನಡದಲ್ಲಿ ವಾದ ಮಂಡಿಸಿದ 12 ಸರ್ಕಾರಿ ಅಭಿಯೋಜಕರು ಹಾಗೂ 18 ವಕೀಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ಪ್ರಾಧಿಕಾರವು ಜ. 22ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾರಂಭ ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಜಿ. ನರೇಂದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

    ಇದನ್ನೂ ಓದಿ: ಇಬ್ಬರು ವಯಸ್ಕ ಪುತ್ರಿಯರ ಜತೆ ನದಿಗೆ ಹಾರಿದ ತಾಯಿ; ಮೂವರ ಶವವೂ ಪತ್ತೆ

    ಕನ್ನಡದಲ್ಲಿ ತೀರ್ಪು ನೀಡಬೇಕು: ಕೋರ್ಟ್‌ಗಳು ಕನ್ನಡದಲ್ಲಿ ತೀರ್ಪು ನೀಡಿದರೆ ಜನರು ನ್ಯಾಯದಾನವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಅರ್ಥಮಾಡಿಕೊಳ್ಳಲು ಸುಲಭವಾಗುತ್ತದೆ. ಆಂಗ್ಲ ಭಾಷೆಯಲ್ಲಿ ತೀರ್ಪು ಹೊರಬಿದ್ದಾಗ ಅದನ್ನು ಅರ್ಥೈಸಿಕೊಳ್ಳುವುದು ಕಷ್ಟ. ಹೈಕೋರ್ಟ್‌ನಲ್ಲಿನ ದೈನಂದಿನ ಆಡಳಿತದ ವ್ಯವಹಾರ ಕನ್ನಡದಲ್ಲಿಯೇ ನಡೆಯಬೇಕು. ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಕಾರ್ಯೋನ್ಮುಖವಾಗಬೇಕು ಎಂದು ಪ್ರಾಧಿಕಾರ ಆಗ್ರಹಿಸಿದೆ.

    ‘ಅಭಿಮಾನಿ ದೇವರುಗಳೇ.. ನಮಸ್ಕಾರ ದೇವರು’: ಡಾ.ರಾಜ್​ ಆದರ್ಶದ ಡಾ.ಬ್ರೋ!

    ಜಿಮ್​ನಲ್ಲಿ ಮಾತಾಡ್ತ ಮಾತಾಡ್ತ ಕುಸಿದು ಬಿದ್ದು ಸಾವಿಗೀಡಾದ ಬಾಡಿಬಿಲ್ಡರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts