More

    ಕನ್ನಡ ಭಾಷೆಯೇ ಅತ್ಯಂತ ಪ್ರಾಚೀನ ಭಾಷೆ

    ಹಾವೇರಿ: 2 ಸಾವಿರ ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಕನ್ನಡ ಭಾಷೆಯೇ ಅತ್ಯಂತ ಪ್ರಾಚೀನ ಭಾಷೆ. ತಮಿಳಿಗರು ತಮ್ಮ ಭಾಷೆ ಅತ್ಯಂತ ಪ್ರಾಚೀನ ಭಾಷೆ ಎಂದು ಪ್ರತಿಪಾದಿಸಿದರೂ ಭಾಷಾ ತಜ್ಞರ ಅಭಿಪ್ರಾಯದಂತೆ ಕನ್ನಡ ಭಾಷೆ ಅತ್ಯಂತ ಪ್ರಾಚೀನ ಭಾಷೆಯಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

    ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ 65ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಏಕೀಕರಣಗೊಂಡ ರಾಜ್ಯಕ್ಕೆ 65 ವರ್ಷಗಳ ಇತಿಹಾಸವಿದ್ದರೆ, ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳಿಗೂ ಅಧಿಕ ಪರಂಪರೆಯಿದೆ ಎಂದರು.

    ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜ ವಂದನೆ ಸ್ವೀಕರಿಸಿ ಪಥಸಂಚಲನದಲ್ಲಿ ಸಚಿವರು ಭಾಗವಹಿಸಿದರು. ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

    ಶಾಸಕ ನೆಹರು ಓಲೇಕಾರ, ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ, ಎಸ್​ಪಿ ಕೆ.ಜಿ. ದೇವರಾಜ್, ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಂ. ಯೋಗೇಶ್ವರ, ಎಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ತಹಸೀಲ್ದಾರ್ ಶಂಕರ ಜಿ.ಎಸ್., ಇದ್ದರು.

    ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ, ನಮ್ಮ ಹೆಮ್ಮೆ: ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಇಚ್ಛಾಶಕ್ತಿ, ಬದ್ಧತೆ ಹಾಗೂ ದೂರದೃಷ್ಟಿಯ ಪರಿಣಾಮವಾಗಿ ಭಾಷಾವಾರು ಪ್ರಾಂತ್ಯಗಳ ರಚನೆಯಾಗಿ ರಾಜ್ಯಗಳು ಅಸ್ತಿತ್ವಕ್ಕೆ ಬಂದವು. 1956ರಲ್ಲಿ ಏಕೀಕರಣಗೊಂಡ ರಾಜ್ಯ ಅಸ್ತಿತ್ವಕ್ಕೆ ಬಂತು. ಕನ್ನಡ ನಾಡಿನ ಅಭಿವೃದ್ಧಿಗೆ ಹಲವರು ಶ್ರಮಿಸಿದ್ದಾರೆ. ಶಂಕರಾಚಾರ್ಯರು, ಬಸವಣ್ಣನವರು, ಪಂಪ, ರನ್ನ, ಕನಕದಾಸರು, ಸರ್ವಜ್ಞರಂಥ ಸಹಸ್ರಾರು ಕವಿಗಳು ಈ ನಾಡಿನ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡ ಭಾಷಾ ಸಾಹಿತ್ಯಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ. ಈ ಎಂಟು ಪುರಸ್ಕಾರ ಪಡೆದವರಲ್ಲಿ ಜಿಲ್ಲೆಯ ವಿ.ಕೃ. ಗೋಕಾಕ ಅವರು ಒಬ್ಬರು ಎಂಬುದು ನಮ್ಮೆಲ್ಲರ ಹೆಮ್ಮೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts