ಸಾಹಿತ್ಯಕ್ಕಿದೆ ಮನಸುಗಳನ್ನು ಒಗ್ಗೂಡಿಸುವ ಶಕ್ತಿ

Latest News

VIDEO: ಕಗ್ಗತ್ತಲೆಯಲ್ಲಿ ಅಡಗಿ ನೆಗೆದರೂ ಗುರಿ ತಪ್ಪಿದ ಚಿರತೆ! ಸಾವಿಗೂ, ಜೀವಕೂ ಕೆಲವೇ ಸೆಕೆಂಡ್​ಗಳ ಅಂತರ

ನವದೆಹಲಿ: ಕಗ್ಗತ್ತಲೆಯಲ್ಲಿ ಅಡಗಿದ್ದು, ಆ ಮಾರ್ಗವಾಗಿ ಬಂದ ಬೈಕ್​ ಸವಾರರ ಮೇಲೆ ಚಿರತೆ ನೆಗೆದರೂ ಕೆಲವೇ ಸೆಕೆಂಡ್​ಗಳ ಅಂತರದಲ್ಲಿ ಸಾವಿನಿಂದ ಪಾರಾದರು. ಚಿರತೆ...

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ...

ಮಹಾರಾಷ್ಟ್ರದಲ್ಲಿ ಕಾಡುತ್ತಿದೆ ಶಾಸಕರ ಕುದುರೆ ವ್ಯಾಪಾರದ ಭೀತಿ: ಎನ್​ಸಿಪಿ ಮಾತ್ರ ನಿರಾತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ತರಾತುರಿ ತೋರುತ್ತಿವೆ. ಸರ್ಕಾರ ರಚನೆ ವಿಳಂಬವಾದಲ್ಲಿ ಬಿಜೆಪಿಯವರು ಆಪರೇಷನ್​ ಕಮಲ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸು: ಬಾಬಾ ರಾಮದೇವ್​

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿದೆ ಎಂದು ಯೋಗಗುರು ಬಾಬಾ ರಾಮದೇವ್​ ತಿಳಿಸಿದರು. ಐದು ದಿನಗಳ ಯೋಗ ಮತ್ತು...

ಮಹಾರಾಷ್ಟ್ರ ಸರ್ಕಾರ: ಮೂರು ಪಕ್ಷಗಳ ಚುನಾವಣಾ ಪ್ರಣಾಳಿಕೆ ಆಧರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಎನ್​ಸಿಪಿ ಮತ್ತು ಕಾಂಗ್ರೆಸ್​ ಬೆಂಬಲಿತ ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ಚುನಾವಣಾ...

ಚಿಕ್ಕಮಗಳೂರು: ನಮ್ಮೆಲ್ಲರನ್ನು ಒಗ್ಗೂಡಿಸುವ ಶಕ್ತಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕುಂದೂರು ಅಶೋಕ್ ಅಭಿಪ್ರಾಯಪಟ್ಟರು.

ಹಿರೇಮಗಳೂರಿನ ಲಕ್ಷ್ಮೀಪುರದ ಗೌರೇಶ್ವರ ಸಮುದಾಯ ಭವನದಲ್ಲಿ ಕಸಾಪ ತಾಲೂಕು ಘಟಕ ಆಯೋಜಿಸಿದ್ದ ಪರಿಷತ್​ನ ಸಂಸ್ಥಾಪನಾ ದಿನಾಚರಣೆಯಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಸಾಹಿತ್ಯ ಪರಿಷತ್ತು ಕನ್ನಡಿಗರ ಹೆಮ್ಮೆಯ ಸಂಕೇತ. ನಮ್ಮ ನಾಡು ನುಡಿ, ನೆಲ ಜಲ, ಸಂಸ್ಕೃತಿ ಸಾಹಿತ್ಯವನ್ನು ರಕ್ಷಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ಸಾಹಿತಿ ಡಾ. ಬೆಳವಾಡಿ ಮಂಜುನಾಥ್ ಮಾತನಾಡಿ, ವಿಶಾಲ ಕರ್ನಾಟಕದ ದೃಷ್ಟಿಕೋನದೊಂದಿಗೆ ಸಾಹಿತ್ಯ ಪರಿಷತ್ ಸ್ಥಾಪನೆಯಲ್ಲಿ ಖ್ಯಾತ ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯ, ಅಂದು ಮೈಸೂರು ಸಂಸ್ಥಾನದಲ್ಲಿ ರಾಜಪ್ರತಿನಿಧಿಯಾಗಿದ್ದ ಎಚ್.ವಿ.ನಂಜುಂಡಯ್ಯ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದು ಈ ಸಂಸ್ಥೆ ಸಾಹಿತ್ಯ ಪ್ರಸಾರ ಸೇರಿ ನಾಡುನುಡಿ ಸೇವೆಯ ಮೂಲಕ ಜನರ ಸ್ವಾಭಿಮಾನದ ಸಂಕೇತವಾಗಿದೆ ಎಂದರು.

ಬಸವೇಶ್ವರರ ವಚನಗಳಲ್ಲಿ ಸಾಮಾಜಿಕ ಕಳಕಳಿ ಕುರಿತು ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ಬಸವಣ್ಣ ಹೃದಯ ಭಾಷೆ ಕನ್ನಡದಲ್ಲಿ ವಚನ ಸಾಹಿತ್ಯದ ಮೂಲಕ ಕ್ರಾಂತಿ ಮಾಡಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ದೊಡ್ಡದು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಬಸವಣ್ಣನ ಜಯಂತಿಯೂ ಮೇ 7ರಂದು ನಡೆಯುವುದರಿಂದ ನಾವು ಈ ದಿನವೇ ಅವರ ವಿಚಾರವನ್ನು ಜನರಿಗೆ ತಿಳಿಸುವ ಉದ್ದೇಶ ಮತ್ತು ಪರಿಷತ್​ನ ಮಹತ್ವ ತಿಳಿಸಲು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಹೇಳಿದರು.

ಪ್ರಗತಿಪರ ಕೃಷಿಕ ಎಲ್.ವಿ.ಪುಪ್ಪೇಗೌಡ, ಎಲ್.ಎಂ.ಚಂದ್ರೇಗೌಡ ಹಾಗೂ ಶಿಕ್ಷಕ ಮಂಜುನಾಥ್ ಅವರನ್ನು ಗೌರವಿಸಲಾಯಿತು. ಕಲ್ಯಾಣನಗರ ಸಾಹಿತ್ಯ ವೇದಿಕೆ ಅಧ್ಯಕ್ಷ ಲೋಕೇಶಪ್ಪ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮಂಜುನಾಥಸ್ವಾಮಿ, ವಸ್ತಾರೆ ಹೋಬಳಿ ಅಧ್ಯಕ್ಷ ನಿಂಗೇಗೌಡ, ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎನ್.ಸುರೇಶ್, ಮುಖಂಡರಾದ ಮಹೇಶ್, ಈಶಣ್ಣ, ಶಶಿಕುಮಾರ್, ಲೋಕೇಶ್, ಕಲ್ಲೇಶ್, ಸಂತೋಷ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಎಚ್.ಎಸ್.ಜಗದೀಶ್ ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

- Advertisement -

Stay connected

278,480FansLike
564FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...