ಕನ್ನಡ ಎಲ್.ಪಿ.ಎಸ್.ಟಿ. ಹುದ್ದೆಗಳ ಭರ್ತಿಗೆ ಆಗ್ರಹ

Ksd_LPST
Published on

ಕಾಸರಗೋಡು: ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ತೆರವಾಗಿರುವ ಎಲ್.ಪಿ.ಎಸ್.ಟಿ. ಹುದ್ದೆಗಳನ್ನು ಕೂಡಲೇ ಭರ್ತಿಮಾಡಬೇಕೆಂದು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘಟನೆಯ ಕೇಂದ್ರ ಸಮಿತಿಯು ಆಗ್ರಹಿಸಿದೆ.

ಜಿಲ್ಲಾ ಶಾಲಾ ಕಲೋತ್ಸವ, ಉಪಜಿಲ್ಲಾ ಮತ್ತು ಜಿಲ್ಲಾಮಟ್ಟದ ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆಯ ಕಾರ್ಯಕ್ರಮಗಳಲ್ಲಿ ಕನ್ನಡದ ಅವಗಣನೆ ಖಂಡಿಸಲಾಯಿತು. ಕನ್ನಡ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯನ್ನು ತ್ವರಿತಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಾಸರಗೋಡು ಜಿಲ್ಲಾ ಶಿಕ್ಷಣ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಶರತ್ ಕುಮಾರ್, ಅಧಿಕೃತ ವಕ್ತಾರ ಸುಕೇಶ, ಮಂಜೇಶ್ವರ ಉಪಜಿಲ್ಲಾ ಕಾರ್ಯದರ್ಶಿ ಜೀವನ್‌ಕುಮಾರ್ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net