21 C
Bengaluru
Thursday, January 23, 2020

ನಕ್ಸಲ್ ಸಂಘಟನೆ ಬೆಂಬಲಿಗರ ಆಯ್ಕೆ ಸರಿಯಲ್ಲ ಈ ಬಗ್ಗೆ ಸಾಹಿತ್ಯ ಪರಿಷತ್ ಪರಾಮರ್ಶೆ ಮಾಡಲಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಚಿಕ್ಕಮಗಳೂರು: ಶೃಂಗೇರಿಯಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಅವರನ್ನು ಆಯ್ಕೆ ಮಾಡಿರುವ ವಿಚಾರದಲ್ಲಿ ಸಹಮತ ಇಲ್ಲದ ಕಾರಣ ಈ ಸಂಬಂಧ ಸಾಹಿತ್ಯ ಪರಿಷತ್ ಮತ್ತೊಮ್ಮೆ ಪರಾಮರ್ಶೆ ನಡೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಸಲಹೆ ಮಾಡಿದ್ದಾರೆ.

ವ್ಯಕ್ತಿಗತವಾಗಿ ಯಾರನ್ನೋ ಟೀಕೆ, ವಿರೋಧ ಮಾಡುತ್ತಿದ್ದೇವೆ ಎನ್ನುವುದಕ್ಕಿಂತ ಆ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ವಿವಾದ ಇದೆ. ಪೊಲೀಸ್ ಇಲಾಖೆ ನೀಡಿದ ವರದಿಯಲ್ಲಿ ಅವರು ನೇರವಾಗಿ ನಕ್ಸಲ್ ಸಂಘಟನೆಯ ಬೆಂಬಲಿಗ ಎನ್ನುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಈ ವಿಚಾರವನ್ನು ಮತ್ತೊಮ್ಮೆ ಪರಾಮಶಿಸಬೇಕು. ಇಲ್ಲದಿದ್ದರೆ ಸಮ್ಮೇಳನ ಯಾವ ಉದ್ದೇಶಕ್ಕೆ ನಡೆಯುತ್ತಿದೆಯೋ ಆ ಉದ್ದೇಶ ಈಡೇರುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಉತ್ತಮವಾಗಿ ಸಾಹಿತ್ಯ ಹಾಗೂ ಸಮಾಜ ಸೇವೆ ಮಾಡಿದ ವಿವಾದಾಸ್ಪದರಲ್ಲದ ಬಹಳಷ್ಟು ಜನರಿದ್ದಾರೆ. ಯಾವುದೇ ಸಿದ್ಧಾಂತ ಇಲ್ಲದವರು ಇರುವಾಗ ಅವರನ್ನು ಆಯ್ಕೆ ಮಾಡಿದರೆ ಪರಿಷತ್​ಗೆ ಗೌರವ ಬರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮೇಳನಾಧ್ಯಕ್ಷರ ಆಯ್ಕೆ ಗೌರವಿಸಿ: ಶೃಂಗೇರಿಯಲ್ಲಿ ನಡೆಯುವ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆ ಆಯ್ಕೆ ಮಾಡಿರುವ ಕ್ರಮವನ್ನು ಜಿಲ್ಲೆಯ ಸಾಹಿತ್ಯಾಭಿಮಾನಿಗಳು, ಪ್ರಜಾತಂತ್ರ ಪ್ರೇಮಿಗಳು ಗೌರವಿಸಬೇಕು ಎಂದು ಹೋರಾಟಗಾರ ನೀಲಗುಳಿ ಪದ್ಮನಾಭ ಹೇಳಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ನಾಡು, ನುಡಿ, ನೆಲ, ಜಲ ಸಂಪತ್ತಿನ ರಕ್ಷಣೆಗೆ ಹೋರಾಡಿದವರಲ್ಲಿ ವಿಠ್ಠಲ ಹೆಗ್ಡೆ ಸಹ ಒಬ್ಬರು. ತುಂಗಾ ಮೂಲ ಉಳಿಸಿ ಹೋರಾಟ ಒಕ್ಕೂಟದ ಅಧ್ಯಕ್ಷರಾಗಿ ಛಾಪೊತ್ತಿದವರು ಅವರು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...