ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆ ನಿವಾಸದಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31ರಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಇಟಲಿಯತ್ತ ಗಣೇಶ್ ಮತ್ತು ತಂಡ ; ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡುಗಳ ಶೂಟಿಂಗ್ಗೆ ಪಯಣ
ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂಪಾಯಿಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಗುರುಕಿರಣ್ ಅತ್ತೆ ಮನೆ ಬೆಂಗಳೂರಿನ ಚಂದ್ರಲೇಔಟ್ನಲ್ಲಿದೆ.
ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯಲ್ಲಿ ಹುಡುಕಾಡಿದ್ದಾರೆ. ಮನೆಯೊಳಗೆ ಯಾರು ಬಂದಿಲ್ಲ ಹೇಗೆ ಕಳ್ಳತನವಾಯ್ತು ಎಂದು ತಲೆಕೆಡಿಸಿಕೊಂಡಿದ್ದಾರೆ.
ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. 6 ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಮನೆ ಕೆಲಸದಾಕೆ ರತ್ಮಮ್ಮ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಮನೆ ಕೆಲಸದಾಕೆಯನ್ನು ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಖ್ಯಾತ ನಟನ ಪುತ್ರಿಗೆ ಮದ್ವೆಗೂ ಮುನ್ನವೇ ತಾಯಿಯಾಗುವ ಬಯಕೆ; ಮಗು ಹೆಸರನ್ನೂ ನಿರ್ಧರಿಸಿದ್ದಾಳೆ ಈಕೆ