More

    ಕನ್ನಡ ನಾಮಫಲಕ ಹೋರಾಟಕ್ಕೆ ಜಯ

    ಸಿಂಧನೂರು: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಮಾಡಿಕೊಳ್ಳುವ ಮೂಲಕ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ನೆಮ್ಮದಿಯ ಜೀವನ ಸಾಗಿಸಬೇಕು ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.

    ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು. ಸಂಘಟನೆಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಿರುವುದು ಶ್ಲಾಘನೀಯ. ರಾಜ್ಯದಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕವಿರಬೇಕು ಎಂಬ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದರು.

    ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಸಂಘಟನೆ ಹೋರಾಟಕ್ಕೆ ಸೀಮಿತಗೊಳ್ಳದೆ, ಸಮಾಜಮುಖಿಯಾದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವ ಮೂಲಕ ಬಡವರಿಗೆ ನೆರವಾಗಿದೆ. ಕನ್ನಡ ಭಾಷೆ, ನೆಲ, ಜಲ ಉಳಿವಿನಲ್ಲಿ ನಾರಾಯಣಗೌಡ ಅವರ ಕೊಡುಗೆ ಇದೆ ಎಂದರು.

    ರಂಭಾಪುರಿ ಶಾಖಾಮಠದ ಸೋಮನಾಥ ಶಿವಾಚಾರ್ಯರು, ಇರಕಲ್ ಮಠದ ಬಸವಪ್ರಸಾದ ಸ್ವಾಮೀಜಿ, ಚಿದಾನಂದಯ್ಯ ಗುರುವಿನ್ ತುರ್ವಿಹಾಳ ಸಾನ್ನಿಧ್ಯ ವಹಿಸಿದ್ದರು. ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ವೇದಿಕೆ ತಾಲೂಕು ಅಧ್ಯಕ್ಷ ಗಂಗಣ್ಣ ಡಿಶ್, ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ರಾಜ್ಯ ಉಪಾಧ್ಯಕ್ಷ ವೀರಭದ್ರಪ್ಪ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗವೇಣಿ ಪಾಟೀಲ್, ನಲ್ಲಾ ವೆಂಕಟೇಶ್ವರರಾವ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts