22.8 C
Bengaluru
Saturday, January 18, 2020

ದೈವ ಸಾಕ್ಷಾತ್ಕಾರದ ಭೂಮಿ ‘ಕರ್ನಾಟಕ’

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಅಕ್ಕಿಆಲೂರ: ಭರತ ಖಂಡದ ಸನಾತನ ಇತಿಹಾಸ ಅವಲೋಕಿಸಿದರೆ, ಋಷಿಮುನಿಗಳ ನೆಚ್ಚಿನ ನಾಡು ನಮ್ಮ ಕರ್ನಾಟಕ. ಇದು ಕೇವಲ ಹೆಸರಲ್ಲ, ದೈವ ಸಾಕ್ಷಾತ್ಕಾರದ ಭೂಮಿ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಎಂ.ಎನ್. ನಂದೀಶ ಹಂಚೆ ಹೇಳಿದರು.

ಪಟ್ಟಣದಲ್ಲಿ ದುಂಡಿ ಬಸವೇಶ್ವರ ಜನಪದ ಕಲಾಸಂಘದಿಂದ ಆಯೋಜಿಸಿರುವ 29ನೇ ಕನ್ನಡ ನುಡಿ ಸಂಭ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ರಾಮಾಯಣ, ಮಹಾಭಾರತ ಹಾಗೂ ಅನೇಕ ಪೌರಾಣಿಕ ಗ್ರಂಥಗಳಲ್ಲಿ ಕನ್ನಡ ನಾಡಿನ ಶ್ರೇಷ್ಠತೆಯ ಬಗ್ಗೆ ಉಲ್ಲೇಖವಾಗಿದೆ. ಜಗತ್ತಿನ ಎಲ್ಲ ಭಾಷೆಗಳನ್ನು ಕಲಿಯಲು ತರಬೇತಿ ತೆಗೆದುಕೊಳ್ಳಬಹುದು. ಆದರೆ, ಕನ್ನಡಿಗರ ಜೊತೆ ಬೆರೆತರೆ ಸಾಕು, ಅಚ್ಚುಕಟ್ಟು ಕನ್ನಡ ಮಾತನಾಡಲು ಸಾಧ್ಯ. ಕನ್ನಡ ಕಲಿಯಬೇಕೆಂಬ ಹುಚ್ಚು ವಿದೇಶದಲ್ಲಿ ಬೆಳೆಯುತ್ತಿದೆ. ಕನ್ನಡ ಮಾತನಾಡುವುದು ವೈಜ್ಞಾನಿಕವಾಗಿ ಆರೋಗ್ಯಕ್ಕೆ ಪೂರಕವಾಗಿದೆ ಎಂದರು.

ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಶಿಕ್ಷಣ ಹೆಚ್ಚಿದಂತೆ ವಿಜ್ಞಾನದ ಆವಿಷ್ಕಾರಗಳು ವೃದ್ಧಿಯಾಗುತ್ತಿದೆ. ಆದರೆ, ನೈತಿಕ ಮೌಲ್ಯಗಳು ಕುಸಿತ ಕಾಣುತ್ತಿದೆ. ಅಧಿಕಾರ- ಹಣಕ್ಕೆ ಬೆಲೆ ನೀಡುವ ಸಂಸ್ಕೃತಿ ದೂರವಾಗಬೇಕು ಎಂದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಮಾತನಾಡಿ, ಕನ್ನಡ ಕಟ್ಟಲು ಬೆಳೆಸಲು ಸರ್ಕಾರ ನೀಡುವ ಎಲ್ಲ ಯೋಜನೆಗಳನ್ನು ತೆಗೆದುಕೊಳ್ಳಲು ದುಂಡಿ ಬಸವೇಶ್ವರ ಜನಪದ ಕಲಾಸಂಘ ಸಮರ್ಥವಾಗಿದೆ. ಸಂಸ್ಕೃತಿ ಉಳಿವಿಗೆ ಶ್ರಮಿಸುತ್ತಿರುವ ಸಂಘಕ್ಕೆ ಹೆಚ್ಚುವರಿ ಅನುದಾನ ನೀಡುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದರು.

ವಿರಕ್ತಮಠದ ಶಿವಬಸವ ಸ್ವಾಮೀಜಿ, ಮುತ್ತಿನಕಂತಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಬಸವರಾಜ ಕೋರಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ, ರಾಜಣ್ಣ ಗೌಳಿ, ಶಿವಶಂಕರ ದೇಶಮುಖ, ನಾಗರಾಜ ಪಾವಲಿ ಉಪಸ್ಥಿತರಿದ್ದರು.

ನಾವು ಕಂಡುಕೊಂಡಂತೆ ಖಾಸಗಿ ಎಫ್​ಎಂ ಜಾಕಿಗಳಿಂದ ಕನ್ನಡ ಮೇಲಿನ ವ್ಯಾಮೋಹ ಯುವ ಸಮುದಾಯದಲ್ಲಿ ಕಡಿಮೆಯಾಗುತ್ತಿದೆ. ಕೆಲವು ಖಾಸಗಿ ಎಂಎಫ್​ಗಳ ಮೇಲೆ ನಿರ್ಬಂಧ ಹೇರುವ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಅಕ್ಷರ ಕಲಿತರೆ ಸಾಲದು, ಸುಸಂಸ್ಕೃತರಾಗಬೇಕು. ಇದು ನಾಡಿನ ಹಿತಾಸಕ್ತಿಗೆ ಅಗತ್ಯವಾಗಿರುತ್ತದೆ.

| ಎಂ.ಎನ್. ನಂದೀಶ ಹಂಚೆ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...