ರಶ್ಮಿಕಾ ಮಂದಣ್ಣರನ್ನು ಕನ್ನಡ ಚಿತ್ರರಂಗದಿಂದ ಬಹಿಷ್ಕರಿಸಿ ಎಂದು ದೂರು ಸಲ್ಲಿಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು: ಕಿರಿಕ್​​ ಪಾರ್ಟಿ ಚಿತ್ರದ ಮೂಲಕ ದಕ್ಷಿಣ ಭಾರತ ಚಿತ್ರೋದ್ಯಮದಲ್ಲಿ ಪ್ರಮುಖ ನಟಿಯಾಗಿ ಗುರುತಿಸಿಕೊಂಡ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಚಲನಚಿತ್ರ ರಂಗದಿಂದ ಬಹಿಷ್ಕರಿಸಿ ಎಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸೋಮವಾರ ದೂರು ನೀಡಿವೆ.

ಕನ್ನಡ ಮಾತನಾಡಲು ಸ್ಪಷ್ಟವಾಗಿ ಬರುವುದಿಲ್ಲ ಎಂದು ಸಂದರ್ಶವೊಂದರಲ್ಲಿ ಹೇಳಿದ್ದ ರಶ್ಮಿಕಾ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಅವರನ್ನು ಕನ್ನಡ ಚಲನಚಿತ್ರರಂಗದಿಂದ ಬಹಿಷ್ಕರಿಸಬೇಕು. ಇನ್ನು ಮುಂದೆ ಅವರು ನಟಿಸುವ ಕನ್ನಡ ಚಿತ್ರಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ಮಂಡಳಿಗೆ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್​​​​ ದೂರು ನೀಡಿದ್ದಾರೆ.

ರಶ್ಮಿಕಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಗಳ ಸ್ಟಾರ್​​ ನಟರೊಂದಿಗೆ ನಟಿಸಿದ್ದಾರೆ. ತೆಲುಗಿನ ವಿಜಯ ದೇವರಕೊಂಡ ನಟನೆಯ ಡಿಯರ್​​ ಕಾಮ್ರೆಡ್​​ ಚಿತ್ರದಲ್ಲಿ ನಟಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *